Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:9 - ಕನ್ನಡ ಸತ್ಯವೇದವು J.V. (BSI)

9 ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ಕಾಯಿ; ಕಣ್ಣುಗುಡ್ಡಿನಂತೆಯೇ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು. ನನಗೆ ಕೇಡುಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನನ್ನು ಬಾಧಿಸುವ ದುಷ್ಟರಿಂದಲೂ, ನನ್ನನ್ನು ಸುತ್ತಿಕೊಳ್ಳುವ ನನ್ನ ಪ್ರಾಣಾಂತಕ ಶತ್ರುಗಳಿಂದಲೂ ತಪ್ಪಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:9
8 ತಿಳಿವುಗಳ ಹೋಲಿಕೆ  

ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಅಕಾರಣವಾಗಿ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.


ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಯೋಚಿಸುವವರು ಮಾನಭಂಗದಿಂದ ಹಿಂದಿರುಗಿ ಓಡಲಿ.


ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.


ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗೋಪ್ಯಸ್ಥಳದಲ್ಲಿ ಅಡಗಿಸುತ್ತೀ.


ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣವೈರಿಯನ್ನೂ ರಕ್ಷಿಸಿದೆನಲ್ಲಾ. ಸೆಲಾ.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು; ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಿಸುವರು.


ನನ್ನ ತಂದೆಯೇ, ಇಗೋ ನೋಡು; ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ; ನಾನು ನಿನ್ನನ್ನು ಕೊಲ್ಲದೆ ನಿನ್ನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವಿಯಲ್ಲಾ;


ಸೌಲನು ಇದನ್ನು ಕೇಳಿ ಮಾವೋನ್ ಅರಣ್ಯಕ್ಕೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು; ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ ಅವನ ಜನರೂ ಬಂದು ಅವರನ್ನು ಸುತ್ತಿ ಹಿಡಿಯುವದಕ್ಕಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು