Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:12 - ಕನ್ನಡ ಸತ್ಯವೇದವು J.V. (BSI)

12 ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ ಉರಿಗೆಂಡಗಳೂ ಹೊರಟು ಆತನ ಸುತ್ತಲಿದ್ದ ಕರೀಮೋಡಗಳನ್ನು ದಾಟಿ ಸುರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು, ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೊಳೆಯಿತು ಮಿಂಚು ಆತನ ತೇಜದ ಸನ್ನಿಧಿಯಿಂದ I ಸುರಿಯಿತು ಕಲ್ಮಳೆ, ಉರಿಗೆಂಡ ಕಾರ್ಮೋಡಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ, ಆತನ ಉಜ್ವಲವಾದ ಪ್ರಕಾಶವು ಮೋಡಗಳನ್ನು ಛೇದಿಸಿಕೊಂಡು ನುಗ್ಗಲು ಆಲಿಕಲ್ಲಿನ ಮಳೆಯು ಸುರಿಯಿತು; ಮಿಂಚುಗಳು ಹೊಳೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರ ಸನ್ನಿಧಿಯ ಪ್ರಕಾಶದಿಂದ ಮೋಡಗಳು, ಕಲ್ಮಳೆ ಹಾಗೂ ಗುಡುಗು ಮಿಂಚುಗಳು ಹೊರಹೊಮ್ಮಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:12
11 ತಿಳಿವುಗಳ ಹೋಲಿಕೆ  

ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಯೆಹೋವನು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿ ಅನೇಕರನ್ನು ಸಾಯಿಸಿದನು. ಇಸ್ರಾಯೇಲ್ಯರ ಕತ್ತಿಯಿಂದ ಸಂಹೃತರಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿ.


ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆನೇಕಲ್ಲಿನ ಮಳೆ ಸುರಿಯಿತು; ಒಂದೊಂದು ಕಲ್ಲು ಹೆಚ್ಚುಕಡಿಮೆ ನಾಲ್ಕುಮಣ ತೂಕವಾಗಿತ್ತು. ಆ ಆನೇಕಲ್ಲಿನ ಮಳೆಯ ಕಾಟವು ಬಹಳ ಹೆಚ್ಚಾಗಿದ್ದದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.


ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು; ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು; ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.


ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿದ್ದೀ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿದ್ದೀ.


ಯೆಹೋವನು ಮೋಶೆಗೆ - ಇಗೋ ನಾನು ನಿನ್ನ ಸಂಗಡ ಮಾತಾಡುವಾಗ ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು ಎಂದು ಹೇಳಿದನು.


ಆಕಾಶಕ್ಕೆ ಅಂಧಕಾರವನ್ನು ಹೊದಿಸಿ ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು