Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:13 - ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನು ಧ್ವನಿಕೊಟ್ಟನು. ಇಗೋ, ಕಲ್ಮಳೆಯೂ ಉರಿಗೆಂಡಗಳೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಗುಡುಗಿದನು ಸರ್ವೇಶ್ವರ ಗಗನಮಂಡಲದಿಂದ I ಮೊಳಗಿತು ವಾಣಿ ಆ ಪರಾತ್ಪರನ ವದನದಿಂದ I ಸುರಿಯಿತಿದೋ ಕಲ್ಮಳೆ, ಉರಿಗೆಂಡ ಮೇಲಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಆಕಾಶದಲ್ಲಿ ಗುಡುಗಿದನು; ಮಹೋನ್ನತ ದೇವರು ತನ್ನ ಧ್ವನಿಯನ್ನು ಕೇಳುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು; ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ ಪ್ರತಿಧ್ವನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:13
18 ತಿಳಿವುಗಳ ಹೋಲಿಕೆ  

ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇವಿುಸಿದ ಸ್ಥಳಕ್ಕೆ ಹೋಗಲು


ಸಮುವೇಲನು ಯಜ್ಞವನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕೋಸ್ಕರ ಸಮೀಪಿಸಲಾಗಿ ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲ್ಯರಿಗೆ ಸೋತು ಓಡಿಹೋಗುವಂತೆ ಮಾಡಿದನು.


ಅವರ ಮೇಲೆ ಕೆಂಡಗಳು ಸುರಿಯಲಿ; ಅವರು ಅಗ್ನಿಕುಂಡದೊಳಕ್ಕೂ ದೊಡ್ಡ ಮಡುವಿನೊಳಕ್ಕೂ ದೊಬ್ಬಲ್ಪಟ್ಟು ತಿರಿಗಿ ಏಳದಿರಲಿ.


ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಜಲಪ್ರವಾಹಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ಕೇಳಿದೆನು. ಅದು - ಹಲ್ಲೆಲೂಯಾ; ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ;


ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿದ್ದ ಕೆಂಡಗಳಿಂದ ತುಂಬಿಸಿ ಭೂವಿುಗೆ ಬಿಸಾಡಿದನು. ಆಗ ಗುಡುಗುಗಳೂ ವಾಣಿಗಳೂ ವಿುಂಚುಗಳೂ ಭೂಕಂಪವೂ ಉಂಟಾದವು.


ಸಿಂಹಾಸನದೊಳಗಿಂದ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಹೊರಡುತ್ತವೆ. ಅದರ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.


ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ - ಗುಡುಗಿತು ಅಂದರು. ಇನ್ನು ಕೆಲವರು - ದೇವದೂತನು ಈತನ ಸಂಗಡ ಮಾತಾಡಿದನು ಅಂದರು.


ಆತನ ಮುಂದೆ ಮುಂದೆ ವ್ಯಾಧಿಯು ನಡೆಯುತ್ತದೆ; ಆತನ ಹೆಜ್ಜೆಜಾಡುಗಳಲ್ಲಿ ಜ್ವರಜ್ವಾಲೆಯು ಏಳುತ್ತದೆ.


ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಪ್ರಾಕಾರದ ಪರ್ಯಂತವೂ ಕೇಳಿಸಿತು.


ಅವರ ದನಗಳನ್ನು ಕಲ್ಮಳೆಗೂ ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು.


ನಿನ್ನ ಕೈಯೂ ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟಮೃಗಗಳನ್ನೂ ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.


ಆ ಗುಡುಗುವಿುಂಚುಗಳನ್ನೂ ತುತೂರಿ ಧ್ವನಿಯಾಗುತ್ತಿರುವದನ್ನೂ ಬೆಟ್ಟದಿಂದ ಹೊಗೆ ಹೊರಡುವದನ್ನೂ ಜನರೆಲ್ಲರು ನೋಡಿ ನಡುಗುತ್ತಾ ದೂರದಲ್ಲಿ ನಿಂತುಕೊಂಡರು.


ಝಗಝಗಿಸುವ ವಿುಂಚೂ ಅದರೊಂದಿಗಿತ್ತು. ಐಗುಪ್ತ್ಯರು ಜನಾಂಗವಾದಂದಿನಿಂದಲೂ ಆ ದೇಶದಲ್ಲಿ ಅಂಥ ಘೋರವಾದ ಕಲ್ಲಿನ ಮಳೆ ಆಗಿರಲಿಲ್ಲ.


ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಯೆಹೋವನು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿ ಅನೇಕರನ್ನು ಸಾಯಿಸಿದನು. ಇಸ್ರಾಯೇಲ್ಯರ ಕತ್ತಿಯಿಂದ ಸಂಹೃತರಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿ.


ಆತನು ದುಷ್ಟರ ಮೇಲೆ ಪಾಶಗಳನ್ನು ಸುರಿಸಲಿ. ಬೆಂಕಿ ಗಂಧಕ ಉರಿಗಾಳಿ ಇವುಗಳನ್ನು ಅವರ ಪಾನವಾಗಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು