Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:17 - ಕನ್ನಡ ಸತ್ಯವೇದವು J.V. (BSI)

17 ನನಗಿಂತ ಬಲಿಷ್ಠರೂ ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬಿಡಿಸಿ ರಕ್ಷಿಸಿದನೆನ್ನಾ ಶತ್ರುಗಳಿಂದ I ನನಗಿಂತ ಪುಷ್ಟ, ಬಲಿಷ್ಟ ಹಗೆಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನನ್ನು ದ್ವೇಷಿಸುವ ವೈರಿಗಳು ನನಗಿಂತ ಬಲವಾಗಿಯೂ ಶಕ್ತರಾಗಿಯೂ ಇದ್ದರು; ಆತನು ನನ್ನನ್ನು ಅವರಿಂದ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ, ದ್ವೇಷಿಸುತ್ತಿದ್ದ ವೈರಿಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:17
16 ತಿಳಿವುಗಳ ಹೋಲಿಕೆ  

ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.


ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, ನಿನಗೆ ಸಮಾನರು ಯಾರಿದ್ದಾರೆಂದು ನನ್ನ ಎಲುಬುಗಳೆಲ್ಲಾ ಹೇಳುವವು.


ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲುಕಡಿದಿದ್ದಾನೆ; ನನ್ನ ವಿರೋಧಿಯು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣಮಾಡಿದ್ದಾನೆ,


ನನ್ನ ಶತ್ರುಗಳು ಚುರುಕಾದವರೂ ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹುಮಂದಿ.


ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು.


ನನಗೆ ಎಷ್ಟೋ ಮಂದಿ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರದಿಂದ ನನ್ನನ್ನು ಹಗೆಮಾಡುತ್ತಾರೆ.


ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.


ನನಗಿಂತ ಬಲಿಷ್ಠರೂ ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.


ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು -


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.


ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ ನನ್ನನ್ನು ಚೈತನ್ಯಗೊಳಿಸುವಿ; ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈ ಚಾಚುವಿ; ನಿನ್ನ ಬಲಗೈ ನನ್ನನ್ನು ರಕ್ಷಿಸುವದು.


ಮೇಲಣ ಲೋಕದಿಂದ ಕೈಚಾಚಿ ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು