Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:18 - ಕನ್ನಡ ಸತ್ಯವೇದವು J.V. (BSI)

18 ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು; ಆಗ ಯೆಹೋವನು ನನಗೆ ಉದ್ಧಾರಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು, ಆಗ ಯೆಹೋವನು ನನಗೆ ಉದ್ಧಾರಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ಮೇಲೆರಗಿದ್ದರೂ ಹಗೆಗಳು ದುರಂತಕಾಲದಲಿ I ನನಗುದ್ಧಾರಕನಾದ ಪ್ರಭು, ಆ ವಿಪತ್ಕಾಲದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ಕಷ್ಟದಲ್ಲಿದ್ದಾಗ ಅವರು ನನ್ನ ಮೇಲೆ ಆಕ್ರಮಣಮಾಡಲು, ಯೆಹೋವನು ನನಗೆ ಸಹಾಯಕನಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು; ಆದರೆ ಯೆಹೋವ ದೇವರು ನನಗೆ ಆಧಾರವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:18
12 ತಿಳಿವುಗಳ ಹೋಲಿಕೆ  

ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲುಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.


ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಪ್ರತೀಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ; ಅವರು ಜಾರಿಬೀಳುವ ಸಮಯ ಬರುವದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವದು.


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನನಗೆ ಬಲು ಸಿಟ್ಟೇರಿದೆ; ನಾನು [ಯೆರೂಸಲೇವಿುನ ಮೇಲೆ] ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಿಸಬೇಕೆಂದಿದ್ದ ಕೇಡಿಗಿಂತ ಅವು ಹೆಚ್ಚಾಗಿ ಮಾಡಿದವಷ್ಟೆ.


ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು; ಆಗ ಯೆಹೋವನು ನನಗೆ ಉದ್ಧಾರಕನಾದನು.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು


ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು -


ನಿನ್ನ ನೇಮಗಳನ್ನು ಅನುಸರಿಸಿದ್ದರಿಂದ ಇದೆಲ್ಲಾ ನನಗೆ ದೊರಕಿತು.


ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ ನನ್ನನ್ನು ಚೈತನ್ಯಗೊಳಿಸುವಿ; ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈ ಚಾಚುವಿ; ನಿನ್ನ ಬಲಗೈ ನನ್ನನ್ನು ರಕ್ಷಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು