Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:19 - ಕನ್ನಡ ಸತ್ಯವೇದವು J.V. (BSI)

19 ಆತನು ನನ್ನನ್ನು ಬಿಡಿಸಿ ವಿಶಾಲಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬಿಕ್ಕಟ್ಟಿನಿಂದ ಬಿಡಿಸಿ ತಂದನು ಬಯಲಿಗೆ I ಅಕ್ಕರೆಯಿಂದ ಮೆಚ್ಚಿ ರಕ್ಷಕನಾದ ನನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನು ನನ್ನನ್ನು ಪ್ರೀತಿಸುವುದರಿಂದ ನನ್ನನ್ನು ರಕ್ಷಿಸಿದನು; ನನ್ನನ್ನು ಸುರಕ್ಷಿತವಾದ ಸ್ಥಳಕ್ಕೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರು ನನ್ನನ್ನು ಹೊರಗೆ ವಿಶಾಲ ಸ್ಥಳಕ್ಕೆ ತಂದರು; ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ಕಾಪಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:19
8 ತಿಳಿವುಗಳ ಹೋಲಿಕೆ  

ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ ನನ್ನನ್ನು ವಿಶಾಲಸ್ಥಳದಲ್ಲಿ ಇಟ್ಟನು.


ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.


ನೀನು ನನ್ನ ಕಾಲುಗಳಿಗೆ ವಿಶಾಲಸ್ಥಳವನ್ನು ಕೊಟ್ಟದ್ದರಿಂದ ನನ್ನ ಹರಡುಗಳು ಕದಲುವದಿಲ್ಲ.


ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.


ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ ಇಕ್ಕಟ್ಟಿಲ್ಲದ ವಿಶಾಲಸ್ಥಳಕ್ಕೆ ಬರಮಾಡಬೇಕೆಂಬದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬದೂ ಆತನ ಉದ್ದೇಶವಾಗಿದೆ.


ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.


ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಆತನು ಇಸ್ರಾಯೇಲ್ಯರನ್ನು ಸದಾ ಪ್ರೀತಿಸುವವನಾಗಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು