Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:33 - ಕನ್ನಡ ಸತ್ಯವೇದವು J.V. (BSI)

33 ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನನಗಿತ್ತನಾತ ಹುಲ್ಲೆಯಂತ ಮೊನೆಗಾಲು I ಎನ್ನ ಬಿಗಿ ನಿಲ್ಲಿಸಿದ ಮಲೆಗಳ ಮೇಲೂ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆತನು ನನ್ನ ಪಾದಗಳನ್ನು ಜಿಂಕೆಯಂತೆ ವೇಗಗೊಳಿಸುವನು. ಆತನು ನನ್ನನ್ನು ಸ್ಥಿರಗೊಳಿಸುವನು; ಎತ್ತರವಾದ ಸ್ಥಳಗಳಲ್ಲಿ ಬೀಳದಂತೆ ದೃಢಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ, ಅವರು ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:33
6 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕುಮಾಡಿ ನನ್ನ ಉನ್ನತಪ್ರದೇಶಗಳಲ್ಲಿ ನನ್ನನ್ನು ನಡಿಸುತ್ತಾನೆ. ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.


ಆತನು ಅವರನ್ನು ಭೂವಿುಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯವೃದ್ಧಿಯನ್ನುಂಟುಮಾಡಿ ಬಂಡೆಯಿಂದ ಜೇನೂ ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದ್ದೂ;


ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಯೆಹೋವನು ಆಕಾಶದಿಂದ ಗುಡುಗಿದನು; ಪರಾತ್ಪರನು ಧ್ವನಿಗೊಟ್ಟನು.


ನಾನೇ ಯೆಹೋವ, ಇನ್ನು ಯಾವನೂ ಅಲ್ಲ, ನಾನು ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು