Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:39 - ಕನ್ನಡ ಸತ್ಯವೇದವು J.V. (BSI)

39 ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನ ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ನನಗಿತ್ತೆ ನೀ ಕದನಕ್ಕಾಗುವ ಶೌರ್ಯವೆಂಬ ನಡುಕಟ್ಟು I ತಗ್ಗಿಸಿದೆ ಎದುರಾಳಿಗಳನು ನನಗಧೀನ ಮಾಡಿಬಿಟ್ಟು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ದೇವರೇ, ಯುದ್ಧದಲ್ಲಿ ನೀನು ನನ್ನನ್ನು ಬಲಿಷ್ಠನನ್ನಾಗಿ ಮಾಡಿದೆ; ಎಲ್ಲಾ ಶತ್ರುಗಳು ನನ್ನ ಎದುರಿನಲ್ಲಿ ಬೀಳುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ, ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:39
13 ತಿಳಿವುಗಳ ಹೋಲಿಕೆ  

ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ ನನ್ನ ಮಾರ್ಗವನ್ನು ಸರಾಗಮಾಡುವವನೂ ಆತನೇ.


ಆತನು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇವಿುಸಿದನು.


ನನ್ನ ಮೇಲೆ ದ್ವೇಷಮಾಡುವವನು ನನ್ನ ತಂದೆಯ ಮೇಲೆಯೂ ದ್ವೇಷಮಾಡುವವನಾಗಿದ್ದಾನೆ.


ನಮ್ಮನ್ನು ಹಿಂದಟ್ಟುವವರು ನಮ್ಮ ಹೆಗ್ಗತ್ತನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.


ಯೆಹೋವನ ಈ ಮಾತನ್ನು ಕೇಳಿರಿ - ಐಗುಪ್ತದ ಆದಾಯವೂ ಕೂಷಿನ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.


ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.


ದುಷ್ಟನ ಕೆಡುಕು ಅವನನ್ನೇ ಕೊಲ್ಲುವದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.


ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸಿ ಪ್ರಭಾವವುಳ್ಳ ತನ್ನ ದೇಹದ ಸಾರೂಪ್ಯವಾಗುವಂತೆ ಮಾಡುವನು.


ನೀವು ದೇವರಿಗೆ - ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು