Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:42 - ಕನ್ನಡ ಸತ್ಯವೇದವು J.V. (BSI)

42 ಗಾಳಿಯಿಂದ ಬಡಿಸಿಕೊಂಡು ಹೋಗುವ ದೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಪುಡಿಪುಡಿ ಮಾಡಿದೆ ನಾನವರನು ಗಾಳಿಗೆ ತೂರುವ ಧೂಳಿನಂತೆ I ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ನಾನು ನನ್ನ ಶತ್ರುಗಳನ್ನು ಹೊಡೆದು ತುಂಡುತುಂಡು ಮಾಡುವೆನು; ಜಜ್ಜಿ ಪುಡಿಪುಡಿ ಮಾಡುವೆನು; ಗಾಳಿ ಬಡಿದುಕೊಂಡು ಹೋಗುವ ಧೂಳಿನಂತೆ ಅವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವರನ್ನು ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:42
10 ತಿಳಿವುಗಳ ಹೋಲಿಕೆ  

ಇವರು ವೀರರಾಗಿ ರಣದೊಳಗೆ [ಶತ್ರುಗಳನ್ನು] ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ತಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.


ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.


ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.


ದುಷ್ಟರನ್ನು ತುಳಿದುಬಿಡುವಿರಿ; ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು; ಇದು ಸೇನಾಧೀಶ್ವರ ಯೆಹೋವನ ನುಡಿ.


ಮೂಡಲಲ್ಲಿ ಒಬ್ಬನನ್ನು ಎಬ್ಬಿಸಿ ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು ಅವನನ್ನು ರಾಜರ ಮೇಲೆ ಆಳಗೊಡಿಸಿ ಅವರ ಕತ್ತಿಯನ್ನು ದೂಳನ್ನಾಗಿಯೂ ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಒಣಹುಲ್ಲನ್ನಾಗಿಯೂ ಮಾಡಿ


ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವದು; ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾನಿದ್ದಲ್ಲೇ ತುಳಿಯಲ್ಪಡುವದು.


ದೇವರನ್ನು ಬಿಟ್ಟವರೇ, ಇದನ್ನು ಮನಸ್ಸಿಗೆ ತಂದುಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವದಿಲ್ಲ.


ಅವನಿಗೆ ಶ್ರಮೆಬರಲು ದೇವರು ಅವನ ಮೊರೆಯನ್ನು ಆಲೈಸುವನೋ?


ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರ ಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು