Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:50 - ಕನ್ನಡ ಸತ್ಯವೇದವು J.V. (BSI)

50 ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ತಾನೇ ನೇಮಿಸಿದ ಅರಸನಿಗೆ I ಆತನೀವನು ವಿಶೇಷ ರಕ್ಷಣೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನು ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ದೇವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ ದಾವೀದನಿಗೂ ಅವನ ಸಂತತಿಯವರಿಗೂ ಒಡಂಬಡಿಕೆಯ ಪ್ರೀತಿಯನ್ನು ಯುಗಯುಗಕ್ಕೂ ಅನುಗ್ರಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:50
20 ತಿಳಿವುಗಳ ಹೋಲಿಕೆ  

ಅರಸುಗಳಿಗೆ ಜಯಪ್ರದನೂ ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.


ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ದೇವರು ವರಗಳನ್ನು ಅನುಗ್ರಹಿಸಿದ್ದಕ್ಕೂ ಜನರನ್ನು ಕರೆದದ್ದಕ್ಕೂ ಪಶ್ಚಾತ್ತಾಪಪಡುವವನಲ್ಲ.


ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನಿನ್ನ ಅಭಿಷಿಕ್ತನನ್ನು ತಳ್ಳಿಬಿಡಬೇಡ.


ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.


ಕೋಪಾವೇಶದಿಂದ ಅವರನ್ನು ಕಳವಳಗೊಳಿಸುವನು.


ಈಗ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸಿ ಅದನ್ನು ಸದಾಕಾಲವೂ ನಿನ್ನ ಆಶ್ರಯದಲ್ಲಿಟ್ಟುಕೊಳ್ಳಬೇಕೆಂದು ಮನಸ್ಸುಮಾಡಿದ್ದೀ. ಯೆಹೋವನೇ, ನೀನು ಅದನ್ನು ಆಶೀರ್ವದಿಸಿದ್ದೀ; ಅದು ನಿತ್ಯವೂ ಸೌಭಾಗ್ಯದಿಂದಿರುವದು ಎಂದು ಪ್ರಾರ್ಥಿಸಿದನು.


ಯೆಹೋವನ ವಿರೋಧಿಗಳು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂವಿುಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇವಿುಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.


ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದದ್ದು. ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ,


ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.


ಯಾಕಂದರೆ ನಿನ್ನ ಕೃಪೆಯು ಆಕಾಶವನ್ನೂ ನಿನ್ನ ಸತ್ಯತೆಯು ಮುಗಿಲನ್ನೂ ನಿಲುಕುವಷ್ಟು ದೊಡ್ಡವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು