Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:4 - ಕನ್ನಡ ಸತ್ಯವೇದವು J.V. (BSI)

4 ಆದರೂ ಅವುಗಳ ಪ್ರಭುತ್ವವು ಭೂವಿುಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ I ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೂ ಅವುಗಳ ಸಂದೇಶವು ಭೂಲೋಕದಲ್ಲೆಲ್ಲಾ ಹರಡುತ್ತದೆ; ಭೂಮಿಯ ಕಟ್ಟಕಡೆಗಳವರೆಗೂ ವ್ಯಾಪಿಸುತ್ತದೆ. ಆಕಾಶವು ಸೂರ್ಯನಿಗೆ ಮನೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವುಗಳ ಧ್ವನಿ ಭೂಲೋಕವೆಲ್ಲಾ ಹರಡಿವೆ; ಅವುಗಳ ಮಾತುಗಳೋ ಲೋಕದ ಕಟ್ಟಕಡೆಯವರೆಗೂ ಹೋಗುತ್ತವೆ; ಆಕಾಶದಲ್ಲಿ ದೇವರು ಸೂರ್ಯನಿಗೆ ಗುಡಾರ ಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:4
7 ತಿಳಿವುಗಳ ಹೋಲಿಕೆ  

ಆದರೂ ಅವರ ಕಿವಿಗೆ ಬೀಳಲಿಲ್ಲವೇನು ಎಂದು ಕೇಳುತ್ತೇನೆ. ಬಿದ್ದದ್ದು ನಿಶ್ಚಯ. ಸಾರುವವರ ಧ್ವನಿಯು ಭೂವಿುಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿದ್ದೀ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿದ್ದೀ.


ಆತನು ಇಸ್ರಾಯೇಲನ ಮನೆತನದವರ ಕಡೆಗಿದ್ದ ತನ್ನ ಪ್ರೀತಿಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ ನಮ್ಮ ದೇವರ ರಕ್ಷಾಕಾರ್ಯವನ್ನು ನೋಡಿದ್ದಾರೆ.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು