ಕೀರ್ತನೆಗಳು 19:7 - ಕನ್ನಡ ಸತ್ಯವೇದವು J.V. (BSI)7 ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆ ನಂಬಿಕೆಗೆ ಯೋಗ್ಯವಾದದ್ದು; ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ. ಅವು ದೇವಜನರಿಗೆ ಬಲವನ್ನು ಕೊಡುತ್ತವೆ. ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ. ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ. ಅಧ್ಯಾಯವನ್ನು ನೋಡಿ |