Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:8 - ಕನ್ನಡ ಸತ್ಯವೇದವು J.V. (BSI)

8 ಯೆಹೋವನ ನಿಯಮಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನ ನಿಯಮಗಳು ನೀತಿಯ ಕಟ್ಟಳೆಗಳಾಗಿವೆ. ಅವು ಮನುಸ್ಸನ್ನು ಸಂತೋಷಗೂಳಿಸುತ್ತವೆ. ಯೆಹೋವನ ಆಜ್ಞೆಗಳು ಒಳ್ಳೆಯ ಆಜ್ಞೆಗಳಾಗಿವೆ. ಅವು ಕಣ್ಣುಗಳಿಗೆ ಬೆಳಕನ್ನು ನೀಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರ ಸೂತ್ರಗಳು ನೀತಿಯುಳ್ಳವುಗಳಾಗಿದ್ದು ಅವು ಹೃದಯಕ್ಕೆ ಆನಂದಕರವಾಗಿವೆ; ಯೆಹೋವ ದೇವರ ಆಜ್ಞೆಗಳು ಸ್ಪಷ್ಟವಾಗಿದ್ದು, ಕಣ್ಣುಗಳಿಗೆ ಪ್ರಕಾಶಕರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:8
44 ತಿಳಿವುಗಳ ಹೋಲಿಕೆ  

ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.


ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.


ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ ಹೃದಯಾನಂದವೂ ಆದವು; ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!


ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು; ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.


ನಿಜವಾಗಿ ನಿನ್ನ ಎಲ್ಲಾ ನೇಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ; ಎಲ್ಲಾ ವಿುಥ್ಯಾಮಾರ್ಗಗಳನ್ನು ಹಗೆಮಾಡುತ್ತೇನೆ.


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.


ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು.


ನನ್ನ ಮನಸ್ಸು ನಿನ್ನ ನಿಬಂಧನೆಗಳಲ್ಲಿ ಆಸಕ್ತವಾಗಲಿ; ಆಗ ನನ್ನ ಆಶಾಭಂಗಕ್ಕೆ ಕಾರಣವಿರುವದಿಲ್ಲ.


ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.


ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ನೋಡುತ್ತೇನೆ.


ನಾನಂತೂ ದೇವರಿಗಾಗಿ ಜೀವಿಸುವದಕ್ಕೋಸ್ಕರ ಧರ್ಮಪ್ರಮಾಣದ ಮೂಲಕವಾಗಿ ಧರ್ಮಪ್ರಮಾಣದ ಪಾಲಿಗೆ ಸತ್ತೆನು.


ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರುಹು ಉಂಟಾಗುತ್ತದಷ್ಟೆ.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ, ಆಶಿಸಬಾರದೆಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯುತ್ತಿದ್ದಿಲ್ಲ.


ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು; ನಿನ್ನ ವಾಕ್ಯವನ್ನು ಮರೆಯುವದಿಲ್ಲ.


ಸರ್ವಸಂಪತ್ತಿನಲ್ಲಿ ಹೇಗೋ ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.


ನನ್ನ ತುಟಿಗಳಿಂದ ಸ್ತುತಿ ಹೊರಡಲಿ; ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದೀಯಲ್ಲಾ.


ಕಷ್ಟಸಂಕಟಗಳು ನನ್ನನ್ನು ಹಿಡಿದವೆ; ನಿನ್ನ ಆಜ್ಞೆಗಳು ನನಗೆ ಸಂತೋಷಕರವಾಗಿವೆ.


ನಿನ್ನ ವಾಕ್ಯವಿವರಣೆಯಿಂದ ಯುಕ್ತಿಹೀನರಿಗೆ ಜ್ಞಾನೋದಯವಾಗುವದು.


ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ; ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ.


ಇಗೋ, ನಿನ್ನ ನೇಮಗಳನ್ನು ಪ್ರೀತಿಸುತ್ತೇನೆ; ನಿನ್ನ ನೀತಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ಸ್ತುತಿಪಾತ್ರನಾದ ಯೆಹೋವನೇ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.


ಅವರು ತನ್ನ ವಿಧಿಗಳನ್ನು ಕೈಕೊಂಡು ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬದೇ ಆತನ ಉದ್ದೇಶ. ಯಾಹುವಿಗೆ ಸ್ತೋತ್ರ!


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ ಅಂದೆನು.


ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.


ಅವರೊಳಗೆ ವ್ಯಾಜ್ಯವೇನಾದರೂ ಉಂಟಾಗಿದ್ದರೆ ನನ್ನ ಬಳಿಗೆ ಬರುತ್ತಾರೆ; ನಾನು ವಿಚಾರಣೆಮಾಡಿ ಅವರಿಗೆ ನ್ಯಾಯತೀರಿಸಿ ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ ಎಂದು ಹೇಳಿದನು.


ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಷ್ಟಾಗಿ ಮಾಡಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಅಂದನು.


ಹಾಗಾದರೆ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳುಕೊಳ್ಳಬಾರದು. ಬದುಕಿಸುವದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಸಂದೇಹವಿಲ್ಲದೆ ಕರ್ಮಮಾರ್ಗದಿಂದಲೇ ನೀತಿಯುಂಟಾಗುತ್ತಿತ್ತು.


ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದೀ; ನಮ್ಮ ಮೇಲಾದರೋ ರೋಷಗೊಂಡಿದ್ದೀ; ಆದರೂ ನಾವು ಪಾಪವನ್ನು ನಡಿಸುತ್ತಾ ಬಂದೆವು; ಬಹುಕಾಲದಿಂದ ಪಾಪದಲ್ಲಿ ಮುಣುಗಿರುವ ನಮಗೆ ರಕ್ಷಣೆಯಾದೀತೇ?


ನನ್ನ ಪ್ರವಾಸದ ಮನೆಯಲ್ಲಿ ನಿನ್ನ ನಿಬಂಧನೆಗಳು ನನಗೆ ಗಾಯನವಾದವು.


ನಿನ್ನ ಕಟ್ಟಳೆಗಳು ನನ್ನ ಆನಂದವು, ಅವೇ ನನ್ನ ಮಂತ್ರಾಲೋಚಕರು.


ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಿ ಅವರಿಗೆ ನೀತಿನಿಯಮಗಳನ್ನೂ ಯಥಾರ್ಥ ಧರ್ಮೋಪದೇಶವನ್ನೂ ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದಿ.


ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗಮನಿಸಿ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ಏನೂ ಇಲ್ಲದವರಿಗೆ ಭಾಗಗಳನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.


ಅದರಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ಸಂಭ್ರಮದಿಂದಿರಬೇಕು.


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿ ತಂದೆಯಿಲ್ಲದವರೂ ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ನಾನು ನಿಮಗೆ ಬರೆಯಿಸಿಕೊಟ್ಟ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ತಪ್ಪದೆ ಕೈಕೊಳ್ಳಬೇಕು,


ಯೆಹೋವನೇ, ನಿನ್ನ ಆಜ್ಞೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.


ಆತನ ಕೈಕೆಲಸಗಳು ನೀತಿಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು