Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 2:1 - ಕನ್ನಡ ಸತ್ಯವೇದವು J.V. (BSI)

1 ಅನ್ಯಜನಗಳು ದೊಂಬಿಮಾಡುವದೂ ಜನಾಂಗಗಳವರು ವ್ಯರ್ಥಕಾರ್ಯಗಳನ್ನು ಯೋಚಿಸುವದೂ ಯಾಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೊಂಬಿಯೇಳುವುದೇತಕೆ ಅನ್ಯದೇಶವಿದೇಶಗಳು? I ಕುತಂತ್ರ ಹೂಡುವುದೇಕೆ ಅನ್ಯಜಾತಿಜನಾಂಗಗಳು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅನ್ಯಜನಾಂಗಗಳು ಕೋಪಗೊಂಡಿರುವುದೇಕೆ? ಅವರು ಮೂರ್ಖತನದ ಸಂಚುಗಳನ್ನು ಮಾಡುತ್ತಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ರಾಷ್ಟ್ರಗಳು ಒಳಸಂಚು ಮಾಡುವುದೂ ಜನಾಂಗಗಳು ವ್ಯರ್ಥವಾಗಿ ಕುತಂತ್ರ ಮಾಡುವುದೂ ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 2:1
21 ತಿಳಿವುಗಳ ಹೋಲಿಕೆ  

ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿಹೋಯಿತು.


ಅವರು ತಂತ್ರೋಪಾಯಗಳನ್ನು ಕಲ್ಪಿಸಿ ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವದಿಲ್ಲ.


ಆದರೆ ಆ ಒಕ್ಕಲಿಗರು ಅವನ ಮಗನನ್ನು ಕಂಡು - ಇವನೇ ಬಾಧ್ಯಸ್ಥನು, ಬನ್ನಿ ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯವನ್ನು ನಾವೇ ತೆಗೆದುಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು


ಜನಾಂಗಗಳೇ, ಭಂಗಪಡಿಸಿರಿ, ನೀವೂ ಭಂಗಪಡುವಿರಿ; ದೂರದೇಶೀಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.


ಗಾಳಿಯಿಂದ ಬಡಿಸಿಕೊಂಡು ಹೋಗುವ ದೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.


ಸಭಿಕರು ಈ ಮಾತನ್ನು ಕೇಳಿ ರೌದ್ರವಾಗಿ ಅವರನ್ನು ಕೊಲ್ಲಿಸಬೇಕೆಂದು ಯೋಚಿಸಿದರು;


ಹೇಗಂದರೆ - ಅವನನ್ನು ಅನ್ಯರ ಕೈಗೆ ಒಪ್ಪಿಸುವರು, ಇವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, ಕೊರಡೆಗಳಿಂದ ಹೊಡೆಯುವರು, ಕೊಂದುಹಾಕುವರು;


ಆಗ ದೊಂಬೀ ಜನರು ಕೂಡಿ ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು; ಮತ್ತು ಅಧಿಪತಿಗಳು - ಇವರ ವಸ್ತ್ರಗಳನ್ನು ಹರಿದು ತೆಗೆದು ಚಡಿಗಳಿಂದ ಹೊಡೆಯಬೇಕೆಂದು ಅಪ್ಪಣೆಕೊಟ್ಟರು.


ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು ಅವನು ಒಡಂಬಟ್ಟು


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.


ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು.


ಅವರು ನಿನ್ನ ಪ್ರಜೆಗಳಿಗೆ ವಿರೋಧವಾಗಿ ಒಳಸಂಚು ಮಾಡಿ ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು