Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 2:10 - ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಅರಸುಗಳಿರಾ, ವಿವೇಕಿಗಳಾಗಿರ್ರಿ; ದೇಶಾಧಿಪತಿಗಳಿರಾ, ಬುದ್ಧಿಮಾತುಗಳಿಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಂತಲೇ ವಿವೇಕಿಗಳಾಗಿರಿ, ರಾಜರುಗಳೇ, I ಬುದ್ಧಿವಾದಕೆ ಕಿವಿಗೊಡಿ, ದೇಶಾಧಿಪತಿಗಳೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ರಾಜರುಗಳೇ, ವಿವೇಕಿಗಳಾಗಿರಿ. ಅಧಿಪತಿಗಳೇ, ಬುದ್ದಿಮಾತುಗಳಿಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ, ರಾಜರುಗಳೇ, ಈಗ ಜ್ಞಾನವಂತರಾಗಿರಿ. ಭೂಲೋಕದ ಅಧಿಕಾರಿಗಳೇ, ಎಚ್ಚರಿಕೆಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 2:10
10 ತಿಳಿವುಗಳ ಹೋಲಿಕೆ  

ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.


ಜನಾಂಗಗಳು ನಿನ್ನ ಬೆಳಕಿಗೆ ನೆರೆಯುವವು, ಅರಸರು ನಿನ್ನಲ್ಲಿನ ಉದಯಪ್ರಕಾಶಕ್ಕೆ ಬರುವರು.


ತೂರ್ ಸಂಸ್ಥಾನದವರು ಕಾಣಿಕೆಗಳಿಂದ ನಿನ್ನನ್ನು ಸನ್ಮಾನಿಸುವರು; ಪ್ರಜೆಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.


ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿವಾಸಿಗಳಿಲ್ಲದ ದೇಶವನ್ನಾಗಿ ಮಾಡದಂತೆ ಶಿಕ್ಷಣವನ್ನು ಹೊಂದು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಮಕಿತರಾಗುವರು; ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು; ಏಕಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದ ವಿಷಯವನ್ನು ಗ್ರಹಿಸಿಕೊಳ್ಳುವರು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವದಕ್ಕೆ ಬರುವದಿಲ್ಲವೋ ಅವರಿಗೆ ಮಳೆ ಬರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು