Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 2:9 - ಕನ್ನಡ ಸತ್ಯವೇದವು J.V. (BSI)

9 ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕಬ್ಬಿಣದ ಗದೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರುಮಾಡುವಂತೆ ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 2:9
14 ತಿಳಿವುಗಳ ಹೋಲಿಕೆ  

ಆಕೆ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ಫಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.


ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿಹಾಕುವೆನು; ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು.


ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.


ಉರಿಯಿಂದ ಕೆಂಡವನ್ನು ತೆಗೆಯುವದಕ್ಕಾಗಲಿ, ಬಾವಿಯಿಂದ ನೀರನ್ನು ಗೋಚುವದಕ್ಕಾಗಲಿ ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದುಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದು ಬಿಡುವನು.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನೂ ಪಟ್ಟಣವನ್ನೂ ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.


ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅವನನ್ನು ಪುಡಿಪುಡಿಮಾಡುವದು ಎಂದು ಹೇಳಿದನು.


ನಿನ್ನನ್ನು ಸೇವಿಸಲೊಲ್ಲದ ಜನಾಂಗ ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳೇ ಹಾಳಾಗಿ ಹೋಗುವವು.


ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು; ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು; ಇದು ಯೆಹೋವನ ನುಡಿ.


[ಬೆಟ್ಟದೊಳಗಿಂದ] ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ ತಾಮ್ರ ಮಣ್ಣು ಬೆಳ್ಳಿ ಬಂಗಾರಗಳನ್ನು ಚೂರುಚೂರುಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ; ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ; ಕನಸು ನಿಜ, ಅದರ ಅರ್ಥವು ನಂಬತಕ್ಕದು ಎಂದು ಹೇಳಿದನು.


ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು