Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 20:4 - ಕನ್ನಡ ಸತ್ಯವೇದವು J.V. (BSI)

4 ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೆರವೇರಿಸಲಿ ಆತ ನಿನ್ನಿಷ್ಟಾರ್ಥಗಳನು I ಪೂರೈಸಲಿ ಪ್ರಭು ನಿನ್ನಭೀಪ್ಸೆಗಳೆಲ್ಲವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ. ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ; ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 20:4
13 ತಿಳಿವುಗಳ ಹೋಲಿಕೆ  

ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ; ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.


ಆಗ ಯೆಹೋವನಲ್ಲಿ ಸಂತೋಷಿಸುವಿ; ಮತ್ತು ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.


ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ ಅಂದನು.


ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ.


ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಮಾಡುವದಿಲ್ಲ. ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ತಂದೆಯನ್ನು ಏನಾದರೂ ಬೇಡಿಕೊಂಡರೆ ಅದನ್ನು ಆತನು ನನ್ನ ಹೆಸರಿನ ಮೇಲೆ ನಿಮಗೆ ಕೊಡುವನು.


ಸಜ್ಜನರ ಆಶೆಯು ಮಂಗಳಾಸ್ಪದ; ದುರ್ಜನರ ನಿರೀಕ್ಷೆಯು ರೋಷಾಸ್ಪದ.


ನೀನು ಯಾವಾಗಲೂ ನನ್ನ ಪ್ರಾರ್ಥನೆಯನ್ನು ಕೇಳುವವನಾಗಿದ್ದೀ ಎಂದು ನನಗೆ ಗೊತ್ತೇ ಇದೆ; ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿ ಎಂದು ಸುತ್ತಲು ನಿಂತಿರುವ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದೆನೆಂದು ಹೇಳಿದನು.


ಆಕೆಯು ಅವನಿಗೆ - ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿದ್ದಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿದ್ದಿಲ್ಲ, ಹೇಳುತ್ತಿದ್ದಿಲ್ಲ ಅಂದಳು.


ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.


ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ ಎಂದು ಹೇಳಿದನು.


ಅರಸನಾದ ಸೊಲೊಮೋನನು ಶೆಬದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ ಆಕೆಗೆ ತಾನು ಕೊಟ್ಟ ವಸ್ತುಗಳನ್ನಲ್ಲದೆ ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು