Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 20:6 - ಕನ್ನಡ ಸತ್ಯವೇದವು J.V. (BSI)

6 ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು; ತನ್ನ ಭುಜಬಲದಿಂದ ಅವನಿಗೆ ವಿಜಯವನ್ನುಂಟು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒದಗುವನು ಪ್ರಭುವು ಅಭಿಷಿಕ್ತನಿಗೆ I ಓಗೊಡುವನು ಸ್ವರ್ಗದಿಂದಾತನಿಗೆ I ಗೆಲುವನೀವನು ಭುಜಬಲದಿಂದವನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಗ ನಾನು ಇದನ್ನು ಬಲ್ಲೆನು: ಯೆಹೋವ ದೇವರು ತಮ್ಮ ಅಭಿಷಿಕ್ತನಿಗೆ ಜಯ ನೀಡುವರು. ತಮ್ಮ ಜಯದ ಬಲಗೈಯ ಶಕ್ತಿಯಿಂದಲೂ ತಮ್ಮ ಪರಿಶುದ್ಧ ಪರಲೋಕದಿಂದಲೂ ಅವನಿಗೆ ಉತ್ತರಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 20:6
19 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಜನರಿಗೆ ಬಲವೂ ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ನಿಮ್ಮೆಲ್ಲರಿಗೂ ಇಸ್ರಾಯೇಲ್ ಜನರೆಲ್ಲರಿಗೂ ತಿಳಿಯಬೇಕಾದದ್ದೇನಂದರೆ - ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ನಿಮ್ಮೆದುರಿನಲ್ಲಿ ಸ್ವಸ್ಥನಾಗಿ ನಿಂತಿರುತ್ತಾನೆ.


ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -


ಆಕಾಶದಿಂದ ನೋಡು, ಪರಿಶುದ್ಧವೂ ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಆಗ್ರಹವೆಲ್ಲಿ, ನಿನ್ನ ಸಾಹಸಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿಹಿಡಿದಿದ್ದೀ.


ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.


ಯೆಹೋವನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತಿದ್ದಾರೆ, ಅಧಿಕಾರಿಗಳು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ.


ಆದದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಒಡೆಯನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ ಎಂದು ಹೇಳಿದನು.


ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ ಇಗೋ, ಇದ್ದೇನೆ, ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನೂ ಬೆರಳಸನ್ನೆಯನ್ನೂ ಕೆಡುಕಿನ ನುಡಿಯನ್ನೂ ಹೋಗಲಾಡಿಸಿ


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.


ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.


ಭುಜಬಲವನ್ನು ಪ್ರಯೋಗಿಸಿ ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.


ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು; ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮಮಹತ್ತನ್ನು ತಿಳಿದು ನಿನ್ನ ಜನರಾದ ಇಸ್ರಾಯೇಲ್ಯರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.


ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವದಾದರೆ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ ಕ್ಷಮೆಯನ್ನು ಅನುಗ್ರಹಿಸು.


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ


ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದುಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ; ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತರಗಳಲ್ಲಿ ನಡೆಯುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು