Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 20:8 - ಕನ್ನಡ ಸತ್ಯವೇದವು J.V. (BSI)

8 ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೆಳಗಿಳಿವರವರು, ಕುಸಿದು ಬೀಳುವರವರು I ಏಳುವೆವು, ಸ್ಥಿರನಿಲ್ಲುವೆವು ನಾವೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೋ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಬಗ್ಗಿ ಬೀಳುತ್ತಾರೆ, ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 20:8
17 ತಿಳಿವುಗಳ ಹೋಲಿಕೆ  

ಯೆಹೋವನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವದಿಲ್ಲ, ಸದಾ ಸ್ಥಿರವಾಗಿರುತ್ತದೆ.


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ಯೆಹೋವನ ಎಲ್ಲಾ ಶತ್ರುಗಳೂ ಇವರಂತೆಯೇ ನಾಶವಾಗಲಿ; ಆತನ ಭಕ್ತರು ಪ್ರತಾಪದಿಂದ ಉದಯಿಸುವ ಸೂರ್ಯನಂತಿರಲಿ. ದೇಶದಲ್ಲಿ ನಾಲ್ವತ್ತು ವರುಷ ಸಮಾಧಾನವಿತ್ತು.


ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರತೀರದ ಮರಳಿನಂತೆ ಅಸಂಖ್ಯರಾಗಿದ್ದರು.


ಆಗ ದಾವೀದನು ಅವನಿಗೆ - ನೀನು ಈಟಿ ಕತ್ತಿ ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ; ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬರುತ್ತೇನೆ.


ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ - ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ; ಅಲ್ಲಿನ ಬಹುದೂರ ನಿವಾಸಸ್ಥಳವನ್ನೂ ಉದ್ಯಾನ ವನಗಳನ್ನೂ ಪ್ರವೇಶಿಸಿದ್ದೇನೆ;


ಆಸನು ಅವನೆದುರಿಗೆ ಹೋದನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬೈಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.


ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು


ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವದು; ಆತನ ಬಲವಾದ ರೌದ್ರಕ್ಕೆ ಆತನನ್ನು ತೊರೆದುಬಿಟ್ಟವರೆಲ್ಲರೂ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವದಕ್ಕೋಸ್ಕರ ಸೈನ್ಯವನ್ನೂ ಅಶ್ವಬಲವನ್ನೂ ಕೇಳಿಕೊಳ್ಳುವದಕ್ಕೆ ನಾಚಿಕೊಂಡಿದ್ದೆನು.


ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದ ದೆಸೆಯಿಂದ ಸುರಕ್ಷಿತನಾಗುವದಿಲ್ಲ.


ಜೀವರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.


ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವದು.


ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರ ಕಡೆಯಿಂದ ತೊಲಗಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು