Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 21:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸಗೆ ಹರ್ಷವಾಯಿತು ಪ್ರಭು, ನೀ ತೋರಿದ ಪರಾಕ್ರಮಕ್ಕಾಗಿ I ಪರಮಾನಂದಗೊಂಡನವನು, ನೀನಿತ್ತ ವಿಜಯೋತ್ಸವಕ್ಕಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನಿನ್ನ ಬಲವು ರಾಜನನ್ನು ಸಂತೋಷಗೊಳಿಸುವುದು. ನಿನ್ನ ರಕ್ಷಣೆಯು ಅವನನ್ನು ಹರ್ಷಗೊಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನಿಮ್ಮ ಬಲದಲ್ಲಿ ಅರಸನು ಆನಂದಿಸುತ್ತಾನೆ; ನೀವು ಆತನಿಗೆ ಕೊಡುವ ಜಯಗಳಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುತ್ತಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 21:1
14 ತಿಳಿವುಗಳ ಹೋಲಿಕೆ  

ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಯೆಹೂದ್ಯರ ಅರಸನಾಗಿ ಹುಟ್ಟಿದವನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಮೂಡಣದೇಶದಲ್ಲಿ ಕಂಡು ಆತನಿಗೆ ಅಡ್ಡಬೀಳುವದಕ್ಕೆ ಬಂದೆವು ಅಂದರು.


ನನ್ನ ರಕ್ಷಣೆಗೂ ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ ಆಶ್ರಯವೂ ದೇವರಲ್ಲಿಯೇ.


ಯೆಹೋವನು ನನಗೆ ಬಲವೂ ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.


ಕೋಪಾವೇಶದಿಂದ ಅವರನ್ನು ಕಳವಳಗೊಳಿಸುವನು.


ಅರಸನ ಬಲವು ನೀತಿಯಲ್ಲಿ ಆಸಕ್ತವಾಗಿದೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ಬನ್ನಿರಿ, ಯೆಹೋವನಿಗೆ ಉತ್ಸಾಹ ಧ್ವನಿಗೈಯುವಾ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.


ದೇವರೇ, ನೀನು ಬಾಲ್ಯಾರಭ್ಯ ನನ್ನನ್ನು ಉಪದೇಶಿಸುತ್ತಾ ಬಂದಿದ್ದೀ; ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನವರೆಗೂ ಪ್ರಚುರಪಡಿಸುತ್ತಿದ್ದೇನೆ.


ಅರಸನೋ ದೇವರಲ್ಲಿ ಆನಂದಿಸುವನು. ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವದನ್ನು ಕಂಡು ಹಿಗ್ಗುವರು.


ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು