Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:13 - ಕನ್ನಡ ಸತ್ಯವೇದವು J.V. (BSI)

13 ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವದಕ್ಕೆ ಬಾಯಿ ತೆರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಗರ್ಜಿಸುವ ಉಗ್ರಸಿಂಹಗಳಂತೆ ವೈರಿಗಳು I ಕಾದಿಹರು ಬಾಯಿ ತೆರೆದು ನನ್ನ ಕಬಳಿಸಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪ್ರಾಣಿಯೊಂದನ್ನು ಸೀಳಿಹಾಕುತ್ತಾ ಗರ್ಜಿಸುವ ಸಿಂಹದಂತೆ ಅವರ ಬಾಯಿಗಳು ಅಗಲವಾಗಿ ತೆರೆದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹರಿದು ಬಿಡುವ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿತೆರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:13
13 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಅವರು ನನ್ನನ್ನು ನೋಡಿ ಬಾಯಿಕಿಸಿದು - ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ ಅನ್ನುತ್ತಾರೆ.


ನಮ್ಮ ಶತ್ರುಗಳೆಲ್ಲಾ ನಮ್ಮನ್ನು ನೋಡಿ ಬಾಯಿ ಕಿಸಿದಿದ್ದಾರೆ.


ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ಕಿಸಿದು ಛೀಗುಟ್ಟಿ ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ ಇದು, ಬಂದೊದಗಿತು, ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ.


ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.


ನನಗೆ ವಿರುದ್ಧವಾಗಿ ಹಲವರು ಗುಂಪುಕೂಡಿ ಬಾಯಿಕಿಸಿದು ನನ್ನನ್ನು ಅಣಕಿಸಿ ಛೀ ಎಂದು ನನ್ನ ದವಡೆಯ ಮೇಲೆ ಬಡಿದಿದ್ದಾರೆ.


ಕರ್ತನೇ, ಇನ್ನೆಷ್ಟರವರೆಗೆ ಸುಮ್ಮನೆ ನೋಡುತ್ತಾ ಇರುವಿ? ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; ನನ್ನ ಪರಮಪ್ರಿಯಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು.


ಸಿಂಹಗಳ ಬಾಯಿಂದಲೂ ಕಾಡುಕೋಣಗಳ ಕೊಂಬುಗಳಿಂದಲೂ ನನ್ನನ್ನು ತಪ್ಪಿಸು. ನನಗೆ ಸದುತ್ತರವನ್ನು ಕೊಟ್ಟಿದ್ದೀಯಲ್ಲಾ.


ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿಮಾಡಿ ತಲೆ ಆಡಿಸುತ್ತಾ -


ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು