Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:14 - ಕನ್ನಡ ಸತ್ಯವೇದವು J.V. (BSI)

14 ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಸಡಲಿಹೋಗಿವೆ. ನನ್ನ ಗುಂಡಿಗೆ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ನನ್ನ ಮೂಳೆಗಳೆಲ್ಲಾ ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಚೆಲ್ಲಿದ ನೀರಿನಂತಿದ್ದೇನೆ, ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿ ಹೋಗಿದೆ. ನನ್ನ ಹೃದಯವು ಮೇಣದ ಹಾಗೆ ನನ್ನೊಳಗೆ ಕರಗಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:14
15 ತಿಳಿವುಗಳ ಹೋಲಿಕೆ  

ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಲಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; ನನ್ನ ಅಪರಾಧದಿಂದ ನನ್ನ ಶಕ್ತಿಯು ಕುಂದಿಹೋಯಿತು; ನನ್ನ ಎಲುಬುಗಳು ಸವೆದುಹೋಗಿವೆ.


ನನ್ನ ಹೃದಯವನ್ನು ಕುಂದಿಸಿದವನು ದೇವರೇ, ನನ್ನನ್ನು ಗಾಬರಿಪಡಿಸಿದವನು ಸರ್ವಶಕ್ತನೇ.


ಆಯಿ ಎಂಬ ಊರಿನವರು ಅವರನ್ನು ಊರುಬಾಗಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿ ನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಹತಮಾಡಿದರು. ಇದರಿಂದ ಇಸ್ರಾಯೇಲ್ಯರ ಧೈರ್ಯವು ಕರಗಿ ನೀರಾಯಿತು.


ಈಗ ನನ್ನ ಪ್ರಾಣವು ತತ್ತರಿಸುತ್ತದೆ; ಮತ್ತು ನಾನೇನು ಹೇಳಲಿ? ತಂದೆಯೇ, ಈ ಕಾಲದೊಳಗಿಂದ ನನ್ನನ್ನು ತಪ್ಪಿಸು. ಆದರೆ ಇದಕ್ಕಾಗಿಯೇ ಈ ಕಾಲ ಸೇರಿದೆನು.


ನಗರಿಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.


ಹೊಗೆಯು [ಗಾಳಿಯಿಂದ] ಹೇಗೋ ಹಾಗೆ ಅವರು ಆತನಿಂದ ಹಾರಿಹೋಗುವರು; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗುವರು.


ನನ್ನ ಎಲುಬುಗಳನ್ನೆಲ್ಲಾ ಎಣಿಸುವದಕ್ಕಾಗುವದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.


ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ.


ಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.


ಮತ್ತು ಅವರಿಗೆ - ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರ್ರಿ ಎಂದು ಹೇಳಿ


ನನಗೆ ವಿರುದ್ಧವಾಗಿ ಹಲವರು ಗುಂಪುಕೂಡಿ ಬಾಯಿಕಿಸಿದು ನನ್ನನ್ನು ಅಣಕಿಸಿ ಛೀ ಎಂದು ನನ್ನ ದವಡೆಯ ಮೇಲೆ ಬಡಿದಿದ್ದಾರೆ.


ಅವರು ನನ್ನನ್ನು ನೋಡಿ ಬಾಯಿಕಿಸಿದು - ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ ಅನ್ನುತ್ತಾರೆ.


ನಮ್ಮ ಶತ್ರುಗಳೆಲ್ಲಾ ನಮ್ಮನ್ನು ನೋಡಿ ಬಾಯಿ ಕಿಸಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು