Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:21 - ಕನ್ನಡ ಸತ್ಯವೇದವು J.V. (BSI)

21 ಸಿಂಹಗಳ ಬಾಯಿಂದಲೂ ಕಾಡುಕೋಣಗಳ ಕೊಂಬುಗಳಿಂದಲೂ ನನ್ನನ್ನು ತಪ್ಪಿಸು. ನನಗೆ ಸದುತ್ತರವನ್ನು ಕೊಟ್ಟಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ರಕ್ಷಿಸೆನ್ನನು ಸಿಂಹದ ಬಾಯಿಂದ I ಬಿಡಿಸು ಕಾಡುಕೋಣದ ಕೊಂಬಿನಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನನ್ನು ಸಿಂಹದ ಬಾಯಿಂದ ಬಿಡಿಸು; ಹೋರಿಯ ಕೊಂಬುಗಳಿಂದ ನನ್ನನ್ನು ಸಂರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಸಿಂಹಗಳ ಬಾಯಿಂದ ನನ್ನನ್ನು ರಕ್ಷಿಸಿರಿ; ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:21
12 ತಿಳಿವುಗಳ ಹೋಲಿಕೆ  

ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಅವರನ್ನು ಐಗುಪ್ತದೇಶದಿಂದ ಕರಕೊಂಡು ಬಂದವನು ದೇವರೇ; ಅವರು ಕಾಡುಕೋಣದಷ್ಟು ಬಲವುಳ್ಳವರು.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ ಪೊಂತ್ಯ ಪಿಲಾತನೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತವಾಗಿ ಕೂಡಿಕೊಂಡು


ಇನ್ನು ನಾನು ನಿಮ್ಮ ಸಂಗಡ ಬಹಳ ಮಾತುಗಳನ್ನಾಡುವದಿಲ್ಲ, ಯಾಕಂದರೆ ಇಹಲೋಕಾಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ಯಾವದೊಂದೂ ನನ್ನಲ್ಲಿಲ್ಲ;


ಅವರು ಈ ಮಾತನ್ನು ಕೇಳಿ ಆತನನ್ನು ಕೊಲ್ಲುವದಕ್ಕಾಗಿ ಕಲ್ಲು ತಕ್ಕೊಳ್ಳಲು ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟುಹೋದನು.


ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಹೋರಿಗೂಳಿಗಳೂ ಬರುವವು; ಆ ದೇಶವು ರಕ್ತದಿಂದ ನೆನೆಯುವದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗುವದು.


ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ.


ನಾನು ದಿನಾಲು ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ; ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನ ಎಂದು ಹೇಳಿದನು.


ಕರ್ತನೇ, ಇನ್ನೆಷ್ಟರವರೆಗೆ ಸುಮ್ಮನೆ ನೋಡುತ್ತಾ ಇರುವಿ? ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; ನನ್ನ ಪರಮಪ್ರಿಯಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು