Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:22 - ಕನ್ನಡ ಸತ್ಯವೇದವು J.V. (BSI)

22 ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸೋದರರಿಗೆ, ಸಾರುವೆ ನಿನ್ನ ನಾಮ ಮಹಿಮೆಯನ್ನು I ತುಂಬಿದ ಸಭೆಯಲಿ ಮಾಡುವೆ, ನಿನ್ನ ಸ್ತುತಿಯನ್ನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಿನ್ನ ನಾಮದ ಕುರಿತು ನನ್ನ ಸಹೋದರರಿಗೆ ಹೇಳುವೆನು; ಮಹಾಸಭೆಯಲ್ಲಿ ನಿನ್ನನ್ನು ಸುತ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾನು ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಸಭಾ ಮಧ್ಯದಲ್ಲಿ ನಿಮ್ಮನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:22
11 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರು ತನ್ನ ಮಗನಿಗೆ ಅನೇಕ ಮಂದಿ ಸಹೋದರರಿದ್ದು ಅವರಲ್ಲಿ ಆತನೇ ಹಿರಿಯನಾಗಿರಬೇಕೆಂದು ಉದ್ದೇಶಿಸಿ ತಾನು ಯಾರನ್ನು ತನ್ನವರೆಂದು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವದಕ್ಕೆ ಮೊದಲೇ ನೇವಿುಸಿದನು.


ಯೇಸು ಅವರಿಗೆ - ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ನನ್ನನ್ನು ನೋಡುವರು ಎಂದು ಹೇಳಿದನು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.


ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು