Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:30 - ಕನ್ನಡ ಸತ್ಯವೇದವು J.V. (BSI)

30 ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ವಂದಿಪುದು ಪ್ರಭುವನು ಮುಂದಿನ ಪೀಳಿಗೆ I ಸಾರುವುದಾತನ ವದಂತಿಯನು ಜನರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಮುಂದಿನ ಕಾಲದಲ್ಲಿ ನಮ್ಮ ಸಂತತಿಗಳವರು ಯೆಹೋವನ ಸೇವೆಮಾಡುವರು. ಆತನ ಕುರಿತಾಗಿ ಯಾವಾಗಲೂ ಹೇಳುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಸಂತಾನವು ದೇವರನ್ನು ಸೇವಿಸುವುದು; ಮುಂದಿನ ಸಂತತಿಗಳಿಗೆ ಯೆಹೋವ ದೇವರ ಬಗ್ಗೆ ಹೇಳಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:30
10 ತಿಳಿವುಗಳ ಹೋಲಿಕೆ  

ನಾನೂ ದೇವರ ಮೇಲೆ ಭರವಸವಿಟ್ಟವನಾಗಿರುವೆನು ಎಂತಲೂ ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ ಎಂತಲೂ ಹೇಳುತ್ತಾನೆ.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ನಿನ್ನ ಸೇವಕರ ಮಕ್ಕಳು ಬಾಳುವರು. ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು ಎಂದು ಮೊರೆಯಿಡುತ್ತೇನೆ.


ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ [ಪ್ರತಿಯೊಂದರ ವಿಷಯ] - ಇದು ಅಲ್ಲಿಯೇ ಹುಟ್ಟಿದ್ದು ಎಂದು ಬರೆಯುವನು. ಸೆಲಾ.


ನಾನು ಈ ಪ್ರಕಾರ ಬಾಯಿಬಿಡುವದಕ್ಕೆ ಮನಸ್ಸು ಮಾಡಿಕೊಂಡಿದ್ದರೆ ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು.


ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ.


ಫಕ್ಕನೆ ಅವರು ಭಯಭ್ರಾಂತರಾಗುವರು; ಯಾಕಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು