Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:31 - ಕನ್ನಡ ಸತ್ಯವೇದವು J.V. (BSI)

31 ಅವರು ಬಂದು ಆತನ ನೀತಿಯನ್ನೂ ಆತನು ನಡಿಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರು ಬಂದು ಆತನ ನೀತಿಯನ್ನೂ, ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸಾರುವರು ಮುಂದಿನ ಜನತೆಗುದ್ಧಾರವನು I ಅರುಹುವರು ಆತನೆಸಗಿದ ಮಹತ್ಕಾರ್ಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಪ್ರತಿಯೊಂದು ತಲೆಮಾರಿನವರೂ ತಮ್ಮ ಮಕ್ಕಳಿಗೆ ಆತನ ಒಳ್ಳೆಯ ಕಾರ್ಯಗಳ ಬಗ್ಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆ ಸಂತತಿಯವರು ದೇವರ ನೀತಿಯನ್ನು ಇನ್ನೂ ಜನಿಸದ ಜನಾಂಗಕ್ಕೆ ಸಾರಿ ತಿಳಿಸುವರು, ಏಕೆಂದರೆ ಇದನ್ನೆಲ್ಲ ಮಾಡಿದವರು ದೇವರೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:31
15 ತಿಳಿವುಗಳ ಹೋಲಿಕೆ  

ಇದರಿಂದ ಅವು ಮುಂದಿನ ತಲೆಯವರಿಗೆ ಗೊತ್ತಾಗಿ ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ಹೇಗಂದರೆ ದೇವರಿಂದ ದೊರಕುವ ನೀತಿಯು ಅದರಲ್ಲಿ ತೋರಿಬರುತ್ತದೆ. ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುವಂಥದಾಗಿದೆ.


ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ. ಮುಂದೆ ಹುಟ್ಟುವ ಪ್ರಜೆಯು ಯಾಹುವನ್ನು ಕೊಂಡಾಡುತ್ತಾ -


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರುತ್ತಿದ್ದಾರೆ; ಗಂಡು ಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.


ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು ಎಂದು ಯೆಹೋವನು ಹೇಳುತ್ತಾನೆ.


ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು ಧಾರಾಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು