Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:9 - ಕನ್ನಡ ಸತ್ಯವೇದವು J.V. (BSI)

9 ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಾತೆಯುದರದಿಂದ ಎನ್ನನು ಹೊರಬರಿಸಿದವನು ನೀನು I ನಿಶ್ಚಿಂತೆಯಾ ಕೂಸನು ಆಕೆಯ ಮಡಿಲಲಿ ಇರಿಸಿದವನು ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನಂತೂ ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ಹುಟ್ಟಿದ ದಿನದಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ. ನಾನಿನ್ನೂ ತಾಯಿಯ ಗರ್ಭದಲ್ಲಿದ್ದಾಗ ನನಗೆ ಭರವಸೆ ನೀಡಿ ಸಂತೈಸಿದವನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತಾಯಿಯ ಗರ್ಭದೊಳಗಿಂದ ನನ್ನನ್ನು ಹೊರತಂದವರು ನೀವು; ನನ್ನ ತಾಯಿಯ ಎದೆಯಲ್ಲಿ ಇದ್ದಾಗಲೇ ನಾನು ನಿಮ್ಮಲ್ಲಿ ಭರವಸೆಯಿಡುವಂತೆ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:9
8 ತಿಳಿವುಗಳ ಹೋಲಿಕೆ  

ನಾನು ಹುಟ್ಟಿದಂದಿನಿಂದ ನಿನ್ನನ್ನೇ ಆತುಕೊಂಡಿದ್ದೇನೆ; ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವದು ನಿನ್ನಲ್ಲಿಯೇ.


ದೇವರೇ, ನೀನು ಬಾಲ್ಯಾರಭ್ಯ ನನ್ನನ್ನು ಉಪದೇಶಿಸುತ್ತಾ ಬಂದಿದ್ದೀ; ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನವರೆಗೂ ಪ್ರಚುರಪಡಿಸುತ್ತಿದ್ದೇನೆ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು