Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 23:3 - ಕನ್ನಡ ಸತ್ಯವೇದವು J.V. (BSI)

3 ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಮಾರ್ಗದಲ್ಲಿ ನನ್ನನ್ನು ನಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನು ತನ್ನ ಹೆಸರಿಗೆ ತಕ್ಕಂತೆ ನನ್ನ ಪ್ರಾಣಕ್ಕೆ ಚೈತನ್ಯ ನೀಡಿ ನೀತಿಮಾರ್ಗದಲ್ಲಿ ನನ್ನನ್ನು ನಡೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ನನ್ನ ಪ್ರಾಣವನ್ನು ಚೈತನ್ಯಗೊಳಿಸುತ್ತಾರೆ. ತಮ್ಮ ಹೆಸರಿನ ನಿಮಿತ್ತ ನನ್ನನ್ನು ನೀತಿ ಮಾರ್ಗದಲ್ಲಿ ನಡೆಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 23:3
28 ತಿಳಿವುಗಳ ಹೋಲಿಕೆ  

ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ನೀನೇ ನನ್ನ ಬಂಡೆಯೂ ಕೋಟೆಯೂ ಆಗಿದ್ದೀಯಲ್ಲಾ; ಆದದರಿಂದ ನಿನ್ನ ಹೆಸರಿನ ನಿವಿುತ್ತ ದಾರಿತೋರಿಸಿ ನನ್ನನ್ನು ನಡಿಸು.


ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆ ನಂಬಿಕೆಗೆ ಯೋಗ್ಯವಾದದ್ದು; ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.


ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನ ಪಡಿಸು.


ಯೆಹೋವನೇ, ವಿರೋಧಿಗಳು ನನ್ನ ಕೇಡನ್ನೇ ಹಾರೈಸುತ್ತಿರುವದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡಿಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.


ನಿನ್ನ ರಕ್ಷಣಾನಂದವನ್ನು ನಾನು ತಿರಿಗಿ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.


ದೇವರು ಎರಡು ಸಾರಿಯಲ್ಲದೆ ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮಾಡುವನು.


ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.


ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿಮಾಡುವದು.


ನಾನು ಜ್ಞಾನಮಾರ್ಗವನ್ನು ಉಪದೇಶಿಸಿ ಧರ್ಮಮಾರ್ಗದಲ್ಲಿ ನಿನ್ನನ್ನು ನಡಿಸುವೆನು.


ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ; ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವದಿಲ್ಲ.


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.


ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು, ಅವರೊಂದಿಗೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರತರುವೆನು; ದೊಡ್ಡಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.


ಶತ್ರುಗಳು ನನಗೆ ರಹಸ್ಯವಾಗಿ ಒಡ್ಡಿದ ಬಲೆಯೊಳಗೆ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು;


ಆದರೂ ಆತನು ತನ್ನ ಹೆಸರಿನ ನಿವಿುತ್ತವಾಗಿಯೂ ತನ್ನ ಶೌರ್ಯವನ್ನು ಪ್ರಕಟಿಸುವದಕ್ಕಾಗಿಯೂ ಅವರನ್ನು ರಕ್ಷಿಸಿದನು.


ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿವಿುತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು.


ನಾನು ಬಳಲಿದವರನ್ನು ತಂಪುಗೊಳಿಸಿ ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು