Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 24:2 - ಕನ್ನಡ ಸತ್ಯವೇದವು J.V. (BSI)

2 ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕಡಲನು ತಳಪಾಯವನಾಗಿಸಿದವನು ಆತನೆ I ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು ಆತನೇ. ಅದನ್ನು ಜಲರಾಶಿಗಳ ಮೇಲೆ ಕಟ್ಟಿದವನೂ ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ಅವರು ಸಮುದ್ರಗಳ ಮೇಲೆ ಅದನ್ನು ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 24:2
14 ತಿಳಿವುಗಳ ಹೋಲಿಕೆ  

ನೀವು ನನಗೆ ಅಂಜುವದಿಲ್ಲವೋ, ನನ್ನೆದುರಿಗೆ ನಡುಗುವದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇವಿುಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ಆತನು ಭೂವಿುಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ; ಆತನ ಕೃಪೆಯು ಶಾಶ್ವತವಾದದ್ದು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂವಿುಯು ಸ್ಥಿರವಾಗಿರುವದು, ಕದಲುವದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ನಾನು ಲೋಕಕ್ಕೆ ಅಸ್ತಿವಾರಹಾಕಿದಾಗ ನೀನು ಎಲ್ಲಿದ್ದಿ? ನೀನು ಜ್ಞಾನಿಯಾಗಿದ್ದರೆ ಹೇಳು.


ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.


ಭೂವಿುಯು ಇರುವ ತನಕ ಬಿತ್ತನೆಯೂ ಕೊಯಿಲೂ, ಚಳಿಯೂ ಸೆಕೆಯೂ, ಬೇಸಿಗೆಕಾಲವೂ ಹಿಮಕಾಲವೂ, ಹಗಲೂ ಇರುಳೂ ಇವುಗಳ ಕ್ರಮ ತಪ್ಪುವದೇ ಇಲ್ಲ ಅಂದುಕೊಂಡನು.


ಭೂವಿುಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಮಹಿಮಾವಸ್ತ್ರವನ್ನು ಧರಿಸಿದ್ದಾನೆ, ಧರಿಸಿದ್ದಾನೆ. ಶೌರ್ಯವನ್ನು ನಡುಕಟ್ಟಾಗಿ ಬಿಗಿದಿದ್ದಾನೆ; ಭೂಲೋಕವು ಸ್ಥಿರವಾಗಿರುವದು, ಕದಲುವದಿಲ್ಲ.


ದಕ್ಷಿಣೋತ್ತರದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್ ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿಮಾಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು