Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 24:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ನಿಲ್ಲುವದಕ್ಕೆ ಎಂಥವನು ಯೋಗ್ಯನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪ್ರಭುವಿನ ಶಿಖರವನು ಏರಬಲ್ಲವನಾರು ? I ಆ ನಿವಾಸದಲಿ ನಿಲ್ಲಲು ಯೋಗ್ಯನಾರು ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನ ಪರ್ವತವನ್ನು ಹತ್ತುವವರು ಎಂಥವರಾಗಿರಬೇಕು? ಆತನ ಪವಿತ್ರ ಆಲಯದಲ್ಲಿ ನಿಂತುಕೊಳ್ಳುವವರು ಎಂಥವರಾಗಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರ ಪರ್ವತವನ್ನು ಹತ್ತುವವನು ಯಾರು? ಅವರ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 24:3
19 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಗುಡಾರದಲ್ಲಿ ಇಳುಕೊಂಡಿರುವದಕ್ಕೆ ಯೋಗ್ಯನು ಯಾವನು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಹೊಂದುವವರಾದ ನಾವು ಕೃತಜ್ಞತೆಯುಳ್ಳವರಾಗಿದ್ದು ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಭಯದಿಂದಲೂ ಮಾಡೋಣ;


ನಿನ್ನ ಅಂಗಳದಲ್ಲಿ ವಾಸಿಸುವವರಾಗಿ ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೋಸ್ಕರ ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಕೋಪಾವೇಶದಿಂದ ಅವರನ್ನು ಕಳವಳಗೊಳಿಸುವನು.


ನೀನು ಜಯಿಸಿದ ಬಹು ಜನರನ್ನು ಸೆರೆಹಿಡುಕೊಂಡು ಹೋಗಿ ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ ಉನ್ನತಸ್ಥಾನಕ್ಕೆ ಏರಿದ್ದೀ. ದೇವನಾದ ಯಾಹುವೇ, ಅಲ್ಲೇ ವಾಸಿಸುವಿ.


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವಮಂಜೂಷಕ್ಕೋಸ್ಕರವೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು.


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ಸೀಮೋನ ಪೇತ್ರನು ಆತನನ್ನು - ಸ್ವಾಮೀ, ಎಲ್ಲಿಗೆ ಹೋಗುತ್ತೀ? ಎಂದು ಕೇಳಿದ್ದಕ್ಕೆ ಯೇಸು - ನಾನು ಹೋಗುವಲ್ಲಿಗೆ ನೀನು ಈಗ ನನ್ನ ಹಿಂದೆ ಬರಲಾರಿ, ತರುವಾಯ ನನ್ನ ಹಿಂದೆ ಬರುವಿ ಅಂದನು.


ಆಗ ಯೆಹೋವನು ನನಗೆ ಹೀಗೆ ಹೇಳಿದನು - ನರಪುತ್ರನೇ, ಯೆಹೋವನ ಆಲಯದ ಸಕಲ ನಿಯಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವದನ್ನೆಲ್ಲಾ ನೀನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮಂದಟ್ಟುಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನ ವಿಧಿಗಳನ್ನು ಗಮನಿಸು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರಲ್ಲಿ ಸೇರಿಕೊಂಡಿರುವ ಮ್ಲೇಚ್ಫರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು