Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 24:7 - ಕನ್ನಡ ಸತ್ಯವೇದವು J.V. (BSI)

7 ದ್ವಾರಗಳೇ, ಉನ್ನತವಾಗಿರ್ರಿ; ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ; ಮಹಾಪ್ರಭಾವವುಳ್ಳ ಅರಸನು ಆಗವಿುಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದ್ವಾರಗಳೇ ತಲೆ ಎತ್ತಿ ನೋಡಿರಿ, ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ; ಮಹಿಮೆಯ ಅರಸ ಒಳಗೆ ಬರಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 24:7
23 ತಿಳಿವುಗಳ ಹೋಲಿಕೆ  

ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಕೊಳ್ಳುವ ಜನಾಂಗವು ಪ್ರವೇಶಿಸಲಿ!


ಕರ್ತನೇ, ನಮ್ಮ ದೇವರೇ, ನೀನು ಪ್ರಭಾವ ಮಾನ ಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಸಮಸ್ತವನ್ನು ಸೃಷ್ಟಿಸಿದಾತನು ನೀನೇ; ಎಲ್ಲವು ನಿನ್ನ ಚಿತ್ತದಿಂದಲೇ ಇದ್ದವು, ನಿನ್ನ ಚಿತ್ತದಿಂದಲೇ ನಿರ್ಮಿತವಾದವು ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾರೆ.


ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;


ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಸಕಲಜನಾಂಗಗಳನ್ನು ನಡುಗಿಸುವೆನು; ಆಗ ಸಮಸ್ತಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಆ ಆಲಯವನ್ನು ವೈಭವದಿಂದ ತುಂಬಿಸುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆಹೋವನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದವರಾದರು.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯವಿುತ ಸ್ಥಳದಲ್ಲಿಟ್ಟರು; ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ; ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು, ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ ನಿನ್ನ ವಾಸಸ್ಥಾನದಲ್ಲಿ ಸೇರೋಣವಾಗಲಿ.


ನನ್ನ ಸಹೋದರರೇ, ಪ್ರಭಾವವುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.


ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.


ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.


ನಿನ್ನ ರಕ್ಷಣಕಾರ್ಯದಿಂದ ಅವನ ಘನತೆಯು ಬಹು ವೃದ್ಧಿಯಾಯಿತು; ಮಹಿಮಪ್ರಭಾವಗಳನ್ನು ಅವನಿಗೆ ಬರಮಾಡಿದ್ದೀ.


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಎತ್ತರಿಸಿರಿ, ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಿಗೆ ಧ್ವಜವನ್ನೆತ್ತಿರಿ!


ಹಿಂಡಿಗೆ ರಕ್ಷಕವಾದ ಹೂಡೆಯೇ, ಚೀಯೋನ್ ಯುವತಿಯ ಗುಡ್ಡವೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವದು, ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು