Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:20 - ಕನ್ನಡ ಸತ್ಯವೇದವು J.V. (BSI)

20 ನನ್ನ ಪ್ರಾಣವನ್ನು ಕಾಪಾಡಿ ಉಳಿಸು; ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನ ಪ್ರಾಣವನ್ನು ಕಾಪಾಡಿ ಉಳಿಸು; ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕಾಪಾಡು ಪ್ರಭು, ರಕ್ಷಿಸೆನ್ನ ಪ್ರಾಣವನು I ನಿರಾಶೆಗೊಳಿಸಬೇಡ, ಶರಣಾಗತನು ನಾನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರೇ, ನನ್ನನ್ನು ಕಾಪಾಡು, ನನ್ನನ್ನು ರಕ್ಷಿಸು. ನಾನು ನಿನ್ನಲ್ಲಿ ಭರವಸವಿಟ್ಟಿರುವುದರಿಂದ ನನ್ನನ್ನು ನಿರಾಶೆಗೊಳಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಪ್ರಾಣವನ್ನು ಕಾಪಾಡಿ, ನನ್ನನ್ನು ಬಿಡಿಸಿರಿ; ನಾನು ನಾಚಿಕೆಪಡದಂತೆ ಮಾಡಿರಿ, ಏಕೆಂದರೆ ನಾನು ನಿಮ್ಮಲ್ಲಿ ಆಶ್ರಯಪಡೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:20
9 ತಿಳಿವುಗಳ ಹೋಲಿಕೆ  

ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.


ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು ಕರ್ತನ ಹೆಸರನ್ನು ಹೇಳಿ -


ಆಮೇಲೆ ಯೇಸು - ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಎಂದು ಮಹಾಧ್ವನಿಯಿಂದ ಕೂಗಿದನು; ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.


ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು.


ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ ಪ್ರಾಣವೈರಿಗಳಿಂದಲೂ ತಪ್ಪಿಸಿ


ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು