Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:5 - ಕನ್ನಡ ಸತ್ಯವೇದವು J.V. (BSI)

5 ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡಿಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ I ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನಗೆ ಮಾರ್ಗದರ್ಶನ ನೀಡು; ನಿನ್ನ ಸತ್ಯಗಳನ್ನು ನನಗೆ ಉಪದೇಶಿಸು. ನೀನೇ ನನ್ನ ದೇವರು, ನೀನೇ ನನ್ನ ರಕ್ಷಕ. ಹಗಲೆಲ್ಲಾ ನಿನ್ನಲ್ಲಿ ಭರವಸವಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಸತ್ಯದಲ್ಲಿ ಮಾರ್ಗದರ್ಶನ ನೀಡಿ ನನಗೆ ಬೋಧಿಸಿರಿ; ಏಕೆಂದರೆ ನೀವು ನನ್ನ ರಕ್ಷಕ ಆಗಿರುವ ದೇವರಾಗಿದ್ದೀರಿ; ನಿಮ್ಮನ್ನು ನಾನು ದಿನವೆಲ್ಲಾ ನಿರೀಕ್ಷಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:5
36 ತಿಳಿವುಗಳ ಹೋಲಿಕೆ  

ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಲಿನ ನಿಲವುಗಳ ಹತ್ತಿರ ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.


ಯೆಹೋವನ ವಿಧಿನಿಬಂಧನೆಗಳನ್ನು ಕೈಕೊಂಡು ನಡೆಯುವವರಿಗೆ ಆತನ ಎಲ್ಲಾ ಮಾರ್ಗಗಳು ಕೃಪೆಯೂ ಸತ್ಯತೆಯೂ ಉಳ್ಳವು.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.


ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು.


ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.


ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.


ಅವರಿಗೆ ಉಪದೇಶಿಸಲು ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.


ಯಾರಾರು ದೇವರ ಆತ್ಮನಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಮಕ್ಕಳು.


ದೇವರಾದುಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡುವಲ್ಲಿ ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯ ತೀರಿಸುವನೆಂದು ನಿಮಗೆ ಹೇಳುತ್ತೇನೆ.


ಅವರಿಗೆ ಹಸಿವೆ ಬಾಯಾರಿಕೆಗಳು ಆಗವು. ಝಳವೂ ಬಿಸಿಲೂ ಬಡಿಯವು; ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರುಕ್ಕುವ ಒರತೆಗಳ ಬಳಿಯಲ್ಲಿ ನಡಿಸುವನು.


ಉತ್ಕೃಷ್ಟವಾದ ಜ್ಞಾನವಿವೇಕಗಳನ್ನು ನನಗೆ ಹೇಳಿಕೊಡು; ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ.


ಜನವಿರುವ ಊರನ್ನು ಸೇರುವಂತೆ ಅವರನ್ನು ಸರಿಯಾದ ದಾರಿಯಲ್ಲಿ ನಡಿಸಿದನು.


ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವದು.


ಅಲ್ಲಿ ರಾಜಮಾರ್ಗವಿರುವದು, ಹೌದು [ಹೋಗಿಬರುವ] ದಾರಿ; ಅದು ಪರಿಶುದ್ಧಮಾರ್ಗ ಎನಿಸಿಕೊಳ್ಳುವದು; ಯಾವ ಅಶುದ್ಧನೂ ಅಲ್ಲಿ ನಡೆಯನು, ಅದು ದೇವಜನರಿಗಾಗಿಯೇ ಇರುವದು, ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ; ಯೆಹೋವನಲ್ಲಿ ದಿನವೆಲ್ಲಾ ಭಯಭಕ್ತಿಯುಳ್ಳವನಾಗಿರು.


ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ; ದಿನವೆಲ್ಲಾ ಅದೇ ನನ್ನ ಧ್ಯಾನ.


ಅವರೆಲ್ಲರು ದೇವರಿಂದ ಶಿಕ್ಷಿತರಾಗಿರುವರು ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದದೆ; ತಂದೆಯಿಂದ ಕೇಳಿ ಕಲಿತವರೆಲ್ಲರು ನನ್ನ ಬಳಿಗೆ ಬರುತ್ತಾರೆ.


ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ.


ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು.


ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ; ಇರುಳಿನಲ್ಲಿಯೂ ನನಗೆ ಉಪಶಮನವಿಲ್ಲ.


ಯೆಹೋವನೇ, ನಿನ್ನ ನಿಬಂಧನೆಗಳ ಮಾರ್ಗವನ್ನು ಉಪದೇಶಿಸು; ಕಡೇತನಕ ಅದರಲ್ಲಿಯೇ ನಡೆಯುವೆನು.


ನನ್ನ ಯಾತ್ರಾನುಭವವನ್ನು ನಿನಗೆ ಹೇಳಿಕೊಂಡಾಗ ನನಗೆ ಸದುತ್ತರವನ್ನು ದಯಪಾಲಿಸಿದಿ; ನಿನ್ನ ನಿಬಂಧನೆಗಳನ್ನು ನನಗೆ ಉಪದೇಶಿಸು.


ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತಕಾರ್ಯಗಳನ್ನು ನಡಿಸುವನು, ಆತನಂಥ ಉಪದೇಶಕನು ಯಾರು?


ನಮ್ಮ ದೇವರು ನಮ್ಮನ್ನು ವಿಮೋಚಿಸುವದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.


ಯೆಹೋವನು ದಯಾಳುವೂ ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡಿಸುವನು.


ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯು ಯಾವಾಗ ಆಗುವದೋ ಎಂದು ನಿರೀಕ್ಷಿಸಿಕೊಂಡಿದ್ದೇನೆ.


ನಾನಂತು ಯೆಹೋವನನ್ನು ಎದುರು ನೋಡುವೆನು; ನನ್ನ ರಕ್ಷಕನಾದ ದೇವರನ್ನು ಕಾದುಕೊಳ್ಳುವೆನು; ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು