ಕೀರ್ತನೆಗಳು 26:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.