Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:4 - ಕನ್ನಡ ಸತ್ಯವೇದವು J.V. (BSI)

4 ನಾನು ಕುಟಿಲಸ್ವಭಾವಿಗಳ ಸಹವಾಸಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದುಷ್ಟರ ಕೂಟದಲಿ ನಾ ಕೂರುವವನಲ್ಲ I ಕಪಟಿಗಳ ಸಂಘವನು ನಾ ಸೇರುವವನಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಯೋಗ್ಯರಾದ ಅವರಲ್ಲಿ ನಾನೂ ಒಬ್ಬನಲ್ಲ. ನಾನು ಕಪಟಿಗಳ ಜೊತೆ ಸೇರುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೋಸಗಾರರ ಸಂಗಡ ನಾನು ಕುಳಿತುಕೊಳ್ಳಲಿಲ್ಲ; ವಂಚಕರ ಸಂಗಡ ನಾನು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:4
11 ತಿಳಿವುಗಳ ಹೋಲಿಕೆ  

ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ; ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕೂತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.


ಯಾವನು ದುಷ್ಟರ ಆಲೋಚನೆಯಂತೆ ನಡೆಯದೆ ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ ಧರ್ಮನಿಂದಕರೊಡನೆ ಕೂತುಕೊಳ್ಳದೆ


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ದುಷ್ಟರೇ, ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.


ಆದದರಿಂದ ಅನ್ಯಜನರ ಮಧ್ಯದಲ್ಲಿಂದ ಹೊರಟು ಬಂದು ಪ್ರತ್ಯೇಕವಾಗಿರಿ; ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.


ನಿನ್ನ ನೇಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.


ಮೋಸ ಹೋಗಬೇಡಿರಿ; ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.


ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು; ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.


ಮೂಢರೇ, [ಮೂಢತ್ವವನ್ನು] ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ ಎಂದು ಪ್ರಬೋಧಿಸುತ್ತಾಳೆ.


ದೇವರು ನನ್ನನ್ನು ನ್ಯಾಯವಾದ ತ್ರಾಸಿನಲ್ಲಿ ತೂಗಿ ನನ್ನ ಯಥಾರ್ಥತ್ವವನ್ನು ತಿಳಿದುಕೊಳ್ಳಲಿ!


ಮೂರ್ಖತನವು ನನ್ನನ್ನು ಬಿಟ್ಟುಹೋಗಲಿ; ಕೆಟ್ಟತನವನ್ನು ಅರಿಯದಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು