ಕೀರ್ತನೆಗಳು 27:12 - ಕನ್ನಡ ಸತ್ಯವೇದವು J.V. (BSI)12 ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತಳ್ಳಬೇಡೆನ್ನನು ವೈರಿಗಳ ವಶಕ್ಕೆ I ಸುಳ್ಳುಸಾಕ್ಷಿಗಳು, ಕ್ರೂರಿಗಳವರೆನಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ವೈರಿಗಳು ನನ್ನ ಮೇಲೆ ಆಕ್ರಮಣ ಮಾಡಿದ್ದಾರೆ. ನನಗೆ ಕೇಡಾಗಲೆಂದು ಸುಳ್ಳುಗಳನ್ನು ಹೇಳಿದ್ದಾರೆ. ಯೆಹೋವನೇ, ಇಂಥ ವೈರಿಗಳ ಕೈಗೆ ನನ್ನನ್ನು ಕೊಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡಿರಿ; ಸುಳ್ಳುಸಾಕ್ಷಿಗಳೂ ಕ್ರೂರ ನಿಂದಕರೂ ನನಗೆ ವಿರೋಧವಾಗಿ ಎದ್ದಿದ್ದಾರೆ. ಅಧ್ಯಾಯವನ್ನು ನೋಡಿ |
ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.