Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:3 - ಕನ್ನಡ ಸತ್ಯವೇದವು J.V. (BSI)

3 ನನಗೆ ವಿರೋಧವಾಗಿ ದಂಡುಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ ಭರವಸವುಳ್ಳವನಾಗಿಯೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸೇನೆ ಸಮೇತ ಶತ್ರು ಬಂದರೂ ಎದೆಗುಂದೆನು I ಸಮರಕ್ಕೆರಗಿದರೂ ನಾ ಭರವಸೆಯಿಂದಿರುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ. ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ. ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನಗೆ ವಿರೋಧವಾಗಿ ಇಳಿದರೂ ನನ್ನ ಹೃದಯವು ಭಯಪಡದು; ನನ್ನ ಮೇಲೆ ಯುದ್ಧ ಸೈನ್ಯವು ನಡೆದರೂ ನಾನು ಭರವಸೆಯಿಂದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:3
17 ತಿಳಿವುಗಳ ಹೋಲಿಕೆ  

ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.


ಒಂದು ವೇಳೆ ನೀತಿಯ ನಿವಿುತ್ತವೇ ಬಾಧೆಪಟ್ಟರೆ ನೀವು ಧನ್ಯರೇ.


ನೀವು ಹೀಗಿರುವದು ವಿರೋಧಿಗಳ ನಾಶನಕ್ಕೂ ನಿಮ್ಮ ರಕ್ಷಣೆಗೂ ದೇವರಿಂದಾದ ಪ್ರಮಾಣವಾಗಿದೆ.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ನಿನ್ನ ನಂಬಿಕೆಗೆ ನಿನ್ನ ಭಯಭಕ್ತಿಯೂ ನಿನ್ನ ನಿರೀಕ್ಷೆಗೆ ನಿನ್ನ ಸನ್ಮಾರ್ಗವೂ ಆಧಾರವಲ್ಲವೋ,


ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ -


ಅವನು - ಎಲ್ಲಾ ಯೆಹೂದ್ಯರೇ, ಯೆರೂಸಲೇವಿುನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವದನ್ನು ಕೇಳಿರಿ! ಈ ಮಹಾಸಮೂಹದ ನಿವಿುತ್ತವಾಗಿ ಕಳವಳಗೊಳ್ಳಬೇಡಿರಿ, ಹೆದರಬೇಡಿರಿ, ಯುದ್ಧವು ನಿಮ್ಮದಲ್ಲ, ದೇವರದೇ.


ಫಿಲಿಷ್ಟಿಯರು ತಿರಿಗಿ ಯುದ್ಧಕ್ಕೆ ಬರುವಲ್ಲಿ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಪೂರ್ಣವಾಗಿ ಸೋಲಿಸಿ ಓಡಿಸಿಬಿಟ್ಟನು.


ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯ ಮೇಲೆ ಬಡಿದು ಅವರ ಹಲ್ಲುಗಳನ್ನು ಉದುರಿಸಿ ಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.


ಅವನಿಗೆ ಕೆಟ್ಟ ಸುದ್ದಿಯ ಭಯವಿರುವದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವದರಿಂದ ಅವನ ಮನಸ್ಸು ಸ್ಥಿರವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು