ಕೀರ್ತನೆಗಳು 27:9 - ಕನ್ನಡ ಸತ್ಯವೇದವು J.V. (BSI)9 ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನೇ ನನಗೆ ಸಹಾಯಕನಾಗಿದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದು ಬಿಡಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನೇ, ನನಗೆ ವಿಮುಖನಾಗಬೇಡ: ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ. ನನ್ನ ದೇವರೇ, ನನ್ನ ರಕ್ಷಕನು ನೀನೇ. ನನ್ನನ್ನು ಕೈ ಬಿಡಬೇಡ! ತೊರೆದುಬಿಡಬೇಡ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ; ನಿಮ್ಮ ಸೇವಕನಾದ ನನ್ನನ್ನು ತಳ್ಳಬೇಡಿರಿ; ನೀವೇ ನನಗೆ ಸಹಾಯಕರಾಗಿದ್ದೀರಿ; ನನ್ನ ರಕ್ಷಕ ಆಗಿರುವ ದೇವರೇ, ನನ್ನನ್ನು ತ್ಯಜಿಸಬೇಡಿರಿ. ನನ್ನನ್ನು ಬಿಟ್ಟುಬಿಡಬೇಡಿರಿ. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.