Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 28:3 - ಕನ್ನಡ ಸತ್ಯವೇದವು J.V. (BSI)

3 ನೀನು ದುಷ್ಟರೊಡನೆಯೂ ಪಾತಕಿಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೇದಾಗಲಿ ಎಂದು ಹೇಳಿದರೂ ಒಳಗೆ ಕೇಡಾಗಲಿ ಎಂದು ಯೋಚಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದುರುಳರೊಡನೆ ದೂಡಬೇಡ, ದುರ್ಜನರೊಡನೆ ವಿಸರ್ಜಿಸಬೇಡೆನ್ನನು I ಪರರಿಗವರು ನುಡಿವರು ಶಾಂತಿಯನು ಉದರದಲ್ಲಿಡುವರು ಕ್ರೋಧವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದುಷ್ಟರ ಸಂಗಡವೂ ಅಪರಾಧ ಮಾಡುವವರ ಸಂಗಡವೂ ನನ್ನನ್ನು ಎಳೆಯಬೇಡಿರಿ; ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; ಆದರೆ ಕೇಡು ಅವರ ಹೃದಯದಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 28:3
17 ತಿಳಿವುಗಳ ಹೋಲಿಕೆ  

ಅವನ ಬಾಯಿ ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯವೇ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚುಕತ್ತಿಗಳೇ ಸರಿ.


ಪ್ರತಿಯೊಬ್ಬರು ನೆರೆಯವರೊಡನೆ ಹುಸಿಯನ್ನಾಡುತ್ತಾರೆ. ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತಾಡುತ್ತಾರೆ.


ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ ಹಲ್ಲುಗಳಿಗೆ ಕುರುಕುವದೇನಾದರೂ ಸಿಕ್ಕಿರುವ ತನಕ ಶುಭವನ್ನು ಪ್ರಕಟಿಸುವವರೂ ತಮ್ಮ ಬಾಯಿಗೆ ಕವಳಕೊಡದವನ ಮೇಲೆ ಯುದ್ಧನಿರ್ಧರಿಸುವವರೂ ಆಗಿರುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ -


ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಅವನನ್ನು ಉನ್ನತಸ್ಥಾನದಿಂದ ದೊಬ್ಬುವದೇ ಅವರ ಆಲೋಚನೆ. ಸುಳ್ಳಾಡುವದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ.


ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ಅಲ್ಲದ ದಾರಿಯಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವದಿಲ್ಲ.


ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ನನ್ನ ಶತ್ರುವು ಕೆಡುಕನ್ನು ಹೆರಬೇಕೆಂದು ಪ್ರಸವ ವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ ಶೂನ್ಯವನ್ನೇ ಹೆತ್ತನು ನೋಡಿರಿ.


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ದುಷ್ಟಾಧಿಕಾರಿಯೇ, ನೀನು ಕೆಡುಕು ಮಾಡಿ ಹಿಗ್ಗುವದೇನು? ದೇವರ ಕೃಪೆಯು ಯಾವಾಗಲೂ ಇರುವದು.


ಅವನ ಬಾಯಿಯು ಶಾಪಬಲಾತ್ಕಾರವಂಚನೆಗಳಿಂದ ತುಂಬಿದೆ; ಅವನ ನಾಲಿಗೆಯ ಕೆಳಗೆ ಹಾನಿಯೂ ನಾಶವೂ ಕೂತಿವೆ.


ಅವನು [ಇಸ್ರಾಯೇಲ್ಯರ] ಸಮೂಹದವರಿಗೆ - ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು ಎಂದು ಹೇಳಿದನು.


ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ ನಾನು ದುಷ್ಟರೊಡನೆ ಕೂಡಿ ಕೆಟ್ಟ ಕೆಲಸಗಳನ್ನು ನಡಿಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು