Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 28:4 - ಕನ್ನಡ ಸತ್ಯವೇದವು J.V. (BSI)

4 ಅವರ ದುಷ್ಕೃತ್ಯಗಳಿಗೂ ಕೆಡುಕುಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೇಡಿಗರು ಪರರಿಗೆ ಮಾಡಿದುದ ತಾವೇ ಉಣ್ಣಮಾಡು I ಅವರ ದುಷ್ಟಕಾರ್ಯಗಳಿಗೆ ತಕ್ಕುದಾದ ಶಿಕ್ಷೆ ನೀಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು. ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು. ಅವರಿಗೆ ತಕ್ಕ ದಂಡನೆಯನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರ ಕೃತ್ಯಗಳ ಪ್ರಕಾರವಾಗಿಯೂ, ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ; ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ, ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 28:4
19 ತಿಳಿವುಗಳ ಹೋಲಿಕೆ  

ಇಗೋ, ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ನಡತೆಯ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನ ಕೈಯಲ್ಲಿ ಅದೆ.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.


ಇತರರಿಗೆ ಅವಳು ಮಾಡಿದ ಪ್ರಕಾರ ಅವಳಿಗೆ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ; ಅವಳು ಕಲಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿಕೊಡಿರಿ.


ಆದದರಿಂದ ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನಿನ್ನ ಕಡೆಗೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆ; ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು;


ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ.


ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.


ದೇವರೇ, ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದವರು; ಆದದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವದರಿಂದ ಅವರನ್ನು ದೊಬ್ಬಿಬಿಡು.


ನಮ್ಮ ದುಷ್ಕರ್ಮಮಹಾಪರಾಧಗಳ ನಿವಿುತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ ನಮ್ಮಲ್ಲಿ ಇಷ್ಟು ಮಂದಿಯನ್ನು ಉಳಿಸಿದಿ;


ನೀನು ಅವರನ್ನು ಸಂಹರಿಸಿ ಭೂವಿುಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವದೇ ಇಲ್ಲ.


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಯೆಹೋವನೇ ಕೆಡುಕರಿಗೆ ಮುಯ್ಯಿತೀರಿಸಲಿ ಎಂದು ಹೇಳಿದನು.


ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು