ಕೀರ್ತನೆಗಳು 28:7 - ಕನ್ನಡ ಸತ್ಯವೇದವು J.V. (BSI)7 ಯೆಹೋವನು ನನಗೆ ಬಲವೂ ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು. ಅಧ್ಯಾಯವನ್ನು ನೋಡಿ |