ಕೀರ್ತನೆಗಳು 3:3 - ಕನ್ನಡ ಸತ್ಯವೇದವು J.V. (BSI)3 ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿ; ನೀನು ನನ್ನ ಗೌರವಕ್ಕೆ ಆಧಾರನೂ ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ, ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ ಆಗಿದ್ದೀರಿ. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.
ಸ್ವಲ್ಪ ಕಾಲವಾದನಂತರ ನಾನು ಬಂದು ನಿಮ್ಮನ್ನು ಧಾನ್ಯ ದ್ರಾಕ್ಷಾರಸ ಆಹಾರ ದ್ರಾಕ್ಷೇತೋಟ ಎಣ್ಣೇಮರ ಜೇನುತುಪ್ಪ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರಕೊಂಡುಹೋಗುವೆನು; ನೀವು ಸಾಯುವದಿಲ್ಲ, ಬದುಕುವಿರಿ. ಯೆಹೋವನು ನಮ್ಮನ್ನು ರಕ್ಷಿಸುವನು ಎಂದು ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.