Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 3:8 - ಕನ್ನಡ ಸತ್ಯವೇದವು J.V. (BSI)

8 ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. [ಯೆಹೋವನೇ,] ನಿನ್ನ ಆಶೀರ್ವಾದವು ನಿನ್ನ ಪ್ರಜೆಯ ಮೇಲೆ ಇರಲಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜಯ ವಿಜಯ ಲಭಿಸುವುದು ಪ್ರಭುವಿನಿಂದಲೆ I ನಿನ್ನಾಶೀರ್ವಾದವಿರಲಿ, ಪ್ರಭು, ಪ್ರಜೆಯ ಮೇಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು. ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 3:8
22 ತಿಳಿವುಗಳ ಹೋಲಿಕೆ  

ನಾನೇ, ನಾನೇ ಯೆಹೋವನು; ನಾನು ಹೊರತು ಯಾವ ರಕ್ಷಕನೂ ಇಲ್ಲ.


ನಾನಾದರೋ ಸ್ತೋತ್ರಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು.


ನಾನಾದರೋ ನೀನು ಐಗುಪ್ತದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ. ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ವಿನಹ ಯಾವ ರಕ್ಷಕನೂ ಇಲ್ಲ.


ಅವರು - ಸಿಂಹಾಸನಾಸೀನನಾಗಿರುವ ನಮ್ಮ ದೇವರಿಗೂ ಯಜ್ಞದ ಕುರಿಯಾದಾತನಿಗೂ ನಮಗೆ ರಕ್ಷಣೆಯುಂಟಾದದ್ದಕ್ಕಾಗಿ ಸ್ತೋತ್ರ ಎಂದು ಮಹಾ ಶಬ್ದದಿಂದ ಕೂಗಿದರು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಕ್ಕುವದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.


ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಏರ್ಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಹೇಳಿದನು.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.


ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಶಬ್ದವನ್ನು ಕೇಳಿದೆನು. ಅವರು - ಹಲ್ಲೆಲೂಯಾ. ಜಯವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲಿ ಉಂಟು;


ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ನಿಜವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು, ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.


ಯೆಹೋವನ ಮಂಜೂಷವು ಹೊರಡುವಾಗ ಮೋಶೆ - ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಹಗೆಗಾರರು ಬೆಂಗೊಟ್ಟು ಓಡಿಹೋಗಲಿ ಎಂದು ಹೇಳುವನು.


ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾ ಜಯವನ್ನುಂಟುಮಾಡಿದನು.


ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.


ನಿನ್ನ ಸೇವಕನನ್ನು ಪ್ರಸನ್ನಮುಖದಿಂದ ನೋಡು; ಪ್ರೀತಿಯಿಂದ ನನ್ನನ್ನು ರಕ್ಷಿಸು.


ಕ್ಷಣದಲ್ಲಿ ಹರಿದು ಕಾಣದೆಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.


ನಾನು ನಿನ್ನವನು, ರಕ್ಷಿಸು. ನಿನ್ನ ನೇಮಗಳಲ್ಲಿ ಆಸಕ್ತನಾಗಿದ್ದೇನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು