Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:11 - ಕನ್ನಡ ಸತ್ಯವೇದವು J.V. (BSI)

11 ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಎನ್ನ ಗೋಳಾಟವನು ನೀ ಕುಣಿದಾಟವಾಗಿಸಿದೆ I ಎನ್ನ ಗೋಣಿತಟ್ಟನು ಹರ್ಷಾಭರಣವಾಗಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ. ನನ್ನ ಶೋಕವಸ್ತ್ರಗಳನ್ನು ತೆಗೆದುಹಾಕಿ ಹರ್ಷವಸ್ತ್ರಗಳನ್ನು ಹೊದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ; ನೀವು ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಹರ್ಷವಸ್ತ್ರವನ್ನು ನನಗೆ ಧರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:11
28 ತಿಳಿವುಗಳ ಹೋಲಿಕೆ  

ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು.


ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿಕಿನ್ನರಿಗಳಿಂದ ಆತನನ್ನು ಭಜಿಸಲಿ.


ದಮ್ಮಡಿಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತೀವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.


ತಂದೆಯು ತನ್ನ ಆಳುಗಳಿಗೆ - ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನು ಇಡಿರಿ; ಕಾಲಿಗೆ ಜೋಡು ಮೆಡಿಸಿರಿ;


ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವದು; ಸಂಜೆಗೆ ದುಃಖವೆಂಬದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ ಮುಂಜಾನೆ ಹರ್ಷಧ್ವನಿಯು ಕೇಳಿಸುವದು.


ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.


ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ಧಾನ್ಯದ್ರಾಕ್ಷೆಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಅವರಿಗಿರುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ, ಆದರೆ ಲೋಕವು ಸಂತೋಷಿಸುವದು; ನಿಮಗೆ ದುಃಖವಾಗುವದು, ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವದು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ತಮ್ಮ ಮೇಲೆ ಖಡ್ಗವಿಧಿ ಘೋರವ್ಯಾಧಿ ಕ್ಷಾಮ ಮೊದಲಾದ ಆಪತ್ತುಗಳು ಬರುವಾಗ ತಾವು ನಿನ್ನ ನಾಮಮಹತ್ತು ಇರುವ ಈ ಆಲಯದ ಮುಂದೆಯೂ ನಿನ್ನ ಮುಂದೆಯೂ ನಿಂತು ತಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಿಡುವದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡರಷ್ಟೆ.


ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವದು, ಭಯಂಕರ ಜನರ ಪಟ್ಟಣವು ನಿನಗೆ ಅಂಜುವದು.


ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿಯುಂಟಾಯಿತು; ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂತು. ಆದದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನಭಾಗಗಳನ್ನು ಕಳುಹಿಸಿ ಬಡವರಿಗೆ ದಾನಧರ್ಮಮಾಡಬೇಕು.


ಇದಲ್ಲದೆ ಎಜ್ರನು ಅವರಿಗೆ - ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ; ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಭಾಗಗಳನ್ನು ಕಳುಹಿಸಿರಿ. ಈ ದಿನವು ನಮ್ಮ ಕರ್ತನಿಗೆ ಪ್ರತಿಷ್ಠಿತ ದಿನವಾಗಿರುವದರಿಂದ ವ್ಯಸನಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ ಅಂದನು.


ಸಾಕು, ನನ್ನ ಮಗನಾದ ಯೋಸೇಫನು ಸಜೀವನಾಗಿದ್ದಾನೆ; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.


ಅವನ ಗಂಡುಮಕ್ಕಳೂ ಹೆಣ್ಣು ಮಕ್ಕಳೂ ಎಲ್ಲರೂ ದುಃಖಶಮನ ಮಾಡುವದಕ್ಕೆ ಪ್ರಯತ್ನಿಸಿದಾಗ್ಯೂ ಅವನು ಶಾಂತಿಯನ್ನು ಹೊಂದಲೊಲ್ಲದೆ - ನಾನು ಹೀಗೇ ಹಂಬಲಿಸುತ್ತಾ ನನ್ನ ಮಗನಿರುವ ಪಾತಾಳವನ್ನು ಸೇರುವೆನು ಅಂದನು. ಹೀಗೆ ತಂದೆಯು ಮಗನಿಗೋಸ್ಕರ ಅಳುತ್ತಿದ್ದನು.


ಯೆಹೋಷಾಫಾಟನು ಹೆದರಿ ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡು ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.


ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ ಸದುತ್ತರವನ್ನು ದಯಪಾಲಿಸು.


ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ ಜೀವದಿಂದಿರುವವರೆಗೂ ಅರಸನ ಪಂಙ್ತಿಯಲ್ಲಿ ಊಟಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು