Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:2 - ಕನ್ನಡ ಸತ್ಯವೇದವು J.V. (BSI)

2 ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ‘ಹೇ ಪ್ರಭು, ಎನ್ನ ದೇವಾ ‘ ಎಂದೆ I ನಾ ಮೊರೆಯಿಡೆ, ನೀ ಗುಣಪಡಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ದೇವರಾದ ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದಾಗ ನೀನು ನನ್ನನ್ನು ಗುಣಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ದೇವರಾದ ಯೆಹೋವ ದೇವರೇ, ಸಹಾಯಕ್ಕಾಗಿ ನಿಮಗೆ ಮೊರೆಯಿಡಲು, ನನ್ನನ್ನು ಸ್ವಸ್ಥಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:2
14 ತಿಳಿವುಗಳ ಹೋಲಿಕೆ  

ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ನಾಡದು ನನ್ನ ಆಲಯಕ್ಕೆ ಬರುವಿ.


ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ತತ್ತರಿಸುತ್ತವೆ.


ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ; ಅವರ ಗಾಯಗಳನ್ನು ಕಟ್ಟುತ್ತಾನೆ.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.


ನಾನಾದರೋ, ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಉದಯದಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವದು.


ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ ಅವನ ಪತ್ನಿಯನ್ನೂ ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.


ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದ ಪಡುವವು.


ಯಾಹು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ಒಪ್ಪಿಸಲಿಲ್ಲ.


ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.


ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.


ನನ್ನ ದೇವರೇ, ಒಡೆಯನೇ, ನಿನ್ನನ್ನು ಘನಪಡಿಸುವೆನು; ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು