Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:4 - ಕನ್ನಡ ಸತ್ಯವೇದವು J.V. (BSI)

4 ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಭಕ್ತರೇ, ಸಂಕೀರ್ತಿಸಿರಿ ಪ್ರಭುವನು I ಮಾಡಿರಿ ಆತನ ನಾಮಸ್ಮರಣೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ! ಆತನ ಪರಿಶುದ್ಧ ಹೆಸರನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರ ವಿಶ್ವಾಸಿಗಳೇ ಅವರನ್ನು ಕೊಂಡಾಡಿರಿ; ಅವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:4
16 ತಿಳಿವುಗಳ ಹೋಲಿಕೆ  

ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.


ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.


ಆತನು ತನ್ನ ಪ್ರಜೆಗೋಸ್ಕರ [ಘನದ] ಕೊಂಬನ್ನು ಎಬ್ಬಿಸಿದ್ದಾನೆ. ಆದದರಿಂದ ಆತನ ಎಲ್ಲಾ ಭಕ್ತರೂ ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲ್ಯರೂ ಹಿಗ್ಗುತ್ತಾರೆ. ಯಾಹುವಿಗೆ ಸ್ತೋತ್ರ!


ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿಮಾಡಲಿ.


ಯೆಹೋವನ ಮಂಜೂಷದ ಮುಂದೆ ದೇವಾರಾಧನೆ ನಡಿಸುವದಕ್ಕೋಸ್ಕರ ದಾವೀದನು ಕೆಲವು ಮಂದಿ ಲೇವಿಯರನ್ನು ನೇವಿುಸಿದನು. ಇಸ್ರಾಯೇಲ್‍ದೇವರಾದ ಯೆಹೋವನನ್ನು ಸ್ತುತಿಸುವದೂ ಹಾಡಿ ಹರಸುವದೂ ಅವರ ಕರ್ತವ್ಯ.


ಆಗ ಒಬ್ಬನು ಮತ್ತೊಬ್ಬನಿಗೆ - ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ ಎಂದು ಕೂಗಿ ಹೇಳಿದನು.


ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಆಜ್ಞಾಪಿಸುತ್ತಾನೆ.


ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರ್ರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹಧ್ವನಿ ಮಾಡಿರಿ.


ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?


ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.


ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.


ನೀನು ಬಹಳವಾಗಿ ಕನಿಕರಿಸಿ ನನ್ನ ಪ್ರಾಣವನ್ನು ಪಾತಾಳತಲದಿಂದ ತಪ್ಪಿಸಿದ್ದೀಯಲ್ಲಾ.


ಆತನು [ದೂತನನ್ನೋ ಎಂಬಂತೆ] ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು