Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:6 - ಕನ್ನಡ ಸತ್ಯವೇದವು J.V. (BSI)

6 ನಾನಂತೂ ಸುಖದಿಂದಿದ್ದಾಗ - ನನಗೆ ಎಂದಿಗೂ ಚಲನವೇ ಇಲ್ಲವೆಂದು ಹೇಳಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನಾದರೋ ಉಲ್ಲಾಸದಿಂದಿರುವಾಗಲೂ I ನನ್ನನು ಅಲ್ಲಾಡಿಸಲಾಗದೆಂದೆ ಯಾರಿಂದಲೂ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಸುರಕ್ಷಿತವಾಗಿದ್ದಾಗ ನನಗೆ ಕೇಡೇ ಇಲ್ಲವೆಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಸುರಕ್ಷಿತನಾಗಿದ್ದಾಗ, “ನಾನೆಂದೂ ಕದಲುವುದಿಲ್ಲ,” ಎಂದು ಹೇಳಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:6
12 ತಿಳಿವುಗಳ ಹೋಲಿಕೆ  

ನೀನು ನನಗೆ ಆಧಾರವಾಗಿರು; ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು.


ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.


ನನ್ನ ಜೀವಾತ್ಮಕ್ಕೆ - ಜೀವವೇ, ಅನೇಕ ವರುಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಿದ್ದದೆ; ವಿಶ್ರವಿುಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು ಅಂದುಕೊಂಡನು.


ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿಗೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಎಂದಿಗೂ ಕದಲುವದಿಲ್ಲ.


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷದಿನವಾಗಿರುವದು [ಎಂದು ಹರಟಿಕೊಳ್ಳುವರು].


ನಾನು ಶಾಶ್ವತವಾದ ರಾಣಿ ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.


ಅವನು ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಯ ಕೇಡಿಗಾಗಿ ಲಂಚತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವದಿಲ್ಲ.


ತಾನು ಕದಲುವದೇ ಇಲ್ಲ; ತನಗೆ ವಿಪತ್ತು ಎಂದೆಂದಿಗೂ ಸಂಭವಿಸುವದಿಲ್ಲ ಅಂದುಕೊಂಡಿದ್ದಾನೆ.


ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.


ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾಕೃಪೆಯಿಂದ ಸೇರಿಸಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು