Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:22 - ಕನ್ನಡ ಸತ್ಯವೇದವು J.V. (BSI)

22 ನಾನಂತೂ ಭಯಭ್ರಾಂತನಾಗಿ - ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನೆಂದು ಹೇಳಿಕೊಂಡಿದ್ದೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವರಿಂದ ದೂರನಾದೆಯೆಂಬ ದಿಗಿಲೇರಲು I ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು ನನ್ನ ಗಾಬರಿಯಲ್ಲಿ ಹೇಳಿದೆನು; ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:22
20 ತಿಳಿವುಗಳ ಹೋಲಿಕೆ  

ಭರವಸವುಳ್ಳವನಾಗಿಯೇ ಇದ್ದೆನು.


ಆಮೇಲೆ ಅತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಪೂರ್ಣವಂಶವು; ಇಗೋ, ಆ ವಂಶೀಯರು - ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಬುಡನಾಶವಾದೆವು ಅಂದುಕೊಳ್ಳುತ್ತಿದ್ದಾರೆ.


ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದದೆ. ನಿನ್ನಿಂದುಂಟಾದ ದಿಗಿಲಿನಿಂದ ಹಾಳಾದೆನು.


ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.


ಹೀಗಿರಲು ಆತನು ಕಾಣುವದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಬಿದ್ದೇ ಇದೆ, ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳಾನೇ?


ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ನಿನ್ನ ಸಾನ್ನಿಧ್ಯದಿಂದ ಬಿಸಾಡಲ್ಪಟ್ಟಿದ್ದೇನೆ ಅಂದುಕೊಂಡೆನು; ಆದರೂ ನಿನ್ನ ಪರಿಶುದ್ಧಾಲಯವನ್ನು ಪುನಃ ದರ್ಶನಮಾಡುವೆನು.


ಚೀಯೋನ್ ನಗರಿಯಾದರೋ - ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನಲ್ಲಾ ಅಂದುಕೊಂಡಳು.


ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ದಾವೀದನು ತನ್ನ ಮನಸ್ಸಿನಲ್ಲಿ - ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇಬೇಕು. ಆದದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವದೇ ಉತ್ತಮ. ಆಮೇಲೆ ಸೌಲನು ಇಸ್ರಾಯೇಲ್‍ಪ್ರಾಂತಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು, ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು ಅಂದುಕೊಂಡು


ಸೌಲನು ಇದನ್ನು ಕೇಳಿ ಮಾವೋನ್ ಅರಣ್ಯಕ್ಕೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು; ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ ಅವನ ಜನರೂ ಬಂದು ಅವರನ್ನು ಸುತ್ತಿ ಹಿಡಿಯುವದಕ್ಕಿದ್ದರು.


ಯೆಹೋವನೇ, ಮೊರೆಯಿಟ್ಟಿದ್ದೇನೆ; ನನಗೆ ಆಶಾಭಂಗಪಡಿಸಬೇಡ. ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ.


ಆಗ ದಾವೀದನು ಅಬೀಗೈಲಳಿಗೆ - ಈಹೊತ್ತು ನನ್ನನ್ನು ಎದುರುಗೊಳ್ಳುವದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಾಯೇಲ್‍ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ.


ಭುಜಬಲವನ್ನು ಪ್ರಯೋಗಿಸಿ ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.


ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ.


ತಟ್ಟಿರಿ, ನಿಮಗೆ ತೆರೆಯುವದು. ಯಾಕಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವದು, ತಟ್ಟುವವನಿಗೆ ತೆರೆಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು