Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:23 - ಕನ್ನಡ ಸತ್ಯವೇದವು J.V. (BSI)

23 ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿ ತೀರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು! ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೋ ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಭಕ್ತರೇ, ಯೆಹೋವ ದೇವರನ್ನು ಪ್ರೀತಿಸಿರಿ; ಯೆಹೋವ ದೇವರು ನಂಬಿಗಸ್ತರನ್ನು ಕಾಯುತ್ತಾರೆ; ಅಹಂಕಾರಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:23
22 ತಿಳಿವುಗಳ ಹೋಲಿಕೆ  

ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.


ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ; ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.


ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ಪ್ರತಿಫಲವನ್ನು ಕೊಡು.


ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರ್ರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವದಿಲ್ಲ.


ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.


ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಇತರರಿಗೆ ಅವಳು ಮಾಡಿದ ಪ್ರಕಾರ ಅವಳಿಗೆ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ; ಅವಳು ಕಲಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿಕೊಡಿರಿ.


ಪುನರುತ್ಥಾನದಲ್ಲಿ ಆಕೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳುಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ ಅಂದರು.


ಆತನು ಪರಿಶುದ್ಧರ ಸಭೆಯಲ್ಲಿ ಭಯಂಕರನಾದ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭೀಕರನು.


ನನ್ನ ಕೆಡುಕಿಗೆ ಸಮಯನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲ ಮಾಡು.


ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.


ಆತನು ತನ್ನ ಜನರನ್ನು ಪ್ರೀತಿಸುತ್ತಾನೆ; [ಯೆಹೋವನೇ,] ನಿನ್ನ ಭಕ್ತರೆಲ್ಲರೂ ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣ ಸನ್ನಿಧಾನದಲ್ಲಿ ಕೂತಿರುವರು; ನೀನು ಹೇಳುವ ಆಜ್ಞೆಗಳನ್ನು ಶಿರಸ್ಸಾವಹಿಸುವರು.


ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ ನ್ಯಾಯವನ್ನು ಸ್ಥಾಪಿಸುವದಕ್ಕೆ ಮುಂಗೊಂಡಾಗ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;


ಆದದರಿಂದ ಇಸ್ರಾಯೇಲ್ಯರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ ಆತನನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡುತ್ತಾ


ಯೇಸು ಕ್ರಿಸ್ತನ ದಾಸನೂ ಯಾಕೋಬನ ತಮ್ಮನೂ ಆಗಿರುವ ಯೂದನು ತಂದೆಯಾದ ದೇವರಲ್ಲಿ ಪ್ರಿಯರಾದವರೂ ಯೇಸು ಕ್ರಿಸ್ತನಿಗಾಗಿ ಕಾಯಲ್ಪಟ್ಟವರೂ ಆಗಿರುವವರಿಗೆ ಬರೆಯುವದೇನಂದರೆ -


ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವದು; ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.


ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ


ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನು ಹೇಳಿದ ಮಾರ್ಗದಲ್ಲಿ ನಡೆದು ಆತನ ಆಜ್ಞಾವಿಧಿ ನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.


[ನನ್ನ ರೋಗದಲ್ಲಿ] ಹೀಗೆಲ್ಲಾ ಅಂದುಕೊಂಡೆನು - ನನ್ನ ಮಧ್ಯಪ್ರಾಯದಲ್ಲಿ ಪಾತಾಳದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ವಿುಕ್ಕ ವರುಷಗಳು ನನಗೆ ನಷ್ಟವಾದವು.


ಆಮೇಲೆ ಅತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಪೂರ್ಣವಂಶವು; ಇಗೋ, ಆ ವಂಶೀಯರು - ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಬುಡನಾಶವಾದೆವು ಅಂದುಕೊಳ್ಳುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು