Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:5 - ಕನ್ನಡ ಸತ್ಯವೇದವು J.V. (BSI)

5 ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಕೆಯುಳ್ಳ ದೇವರೇ, ನನ್ನನ್ನು ವಿಮೋಚಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನಗಾಧಾರ ನೀನಲ್ಲವೆ? ನನ್ನಾತ್ಮವನು ನಿನಗೊಪ್ಪಿಸಿರುವೆ I ನಂಬಿಕಸ್ತನಾದ ದೇವನೆ, ನೀಯೆನ್ನ ಮುಕ್ತಗೊಳಿಸಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ. ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ. ನನ್ನನ್ನು ರಕ್ಷಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಕೈಗೆ ನನ್ನ ಆತ್ಮವನ್ನು ಒಪ್ಪಿಸಿದ್ದೇನೆ; ನಂಬಿಗಸ್ತದ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನನ್ನು ವಿಮೋಚಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:5
15 ತಿಳಿವುಗಳ ಹೋಲಿಕೆ  

ಆಮೇಲೆ ಯೇಸು - ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಎಂದು ಮಹಾಧ್ವನಿಯಿಂದ ಕೂಗಿದನು; ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.


ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು ಕರ್ತನ ಹೆಸರನ್ನು ಹೇಳಿ -


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ನನ್ನ ತುಟಿಗಳೂ ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.


ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ತನ್ನ ಸ್ವಭಾವಕ್ಕೆ ವಿರುದ್ಧವಾಗಿ ಏನೂ ಮಾಡಲಾರನು.


ಆತನೇ ಇಸ್ರಾಯೇಲನ್ನು ಅದರ ಸಕಲಪಾಪಗಳಿಂದ ವಿಮೋಚಿಸುವನು.


ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು